ಸೋಮವಾರ, ಏಪ್ರಿಲ್ 12, 2021
31 °C

Video: ಬೆಂಗಳೂರು- ಮೈಸೂರಿನಲ್ಲಿ ಕೆಲ ಸರ್ಕಾರಿ ಬಸ್‌ಗಳ ಸಂಚಾರ ಆರಂಭ

ಬೆಂಗಳೂರು/ಮೈಸೂರು: ಬೆಂಗಳೂರು ಮತ್ತು ಮೈಸೂರಿನಲ್ಲಿ ಪೊಲೀಸ್ ಭದ್ರತೆಯಲ್ಲಿ ಕೆಲ ಸರ್ಕಾರಿ ಬಸ್‌ಗಳ ಸಂಚಾರ ಆರಂಭಿಸಲಾಗಿದೆ. ಮೆಜೆಸ್ಟಿಕ್ ಬಸ್‌ ನಿಲ್ದಾಣದಿಂದ ಪೊಲೀಸ್ ಭದ್ರತೆಯಲ್ಲಿ ಕೆಲಸಕ್ಕೆ ಹಾಜರಾದ ಕೆಲವೇ ಕೆಲವು ಸಿಬ್ಬಂದಿಯನ್ನು ಬಳಸಿಕೊಂಡು ಕೆಲವು ಬಿಎಂಟಿಸಿ ಬಸ್‌ಗಳ ಸಂಚಾರ ನಡೆಸಲಾಗುತ್ತಿದೆ. ಇತ್ತ, ಸ್ಯಾಟಲೈಟ್ ಬಸ್ ನಿಲ್ದಾಣದಿಂದ 25 ಪ್ರಯಾಣಿಕರನ್ನು ಹೊತ್ತ ಐರಾವತ ಬಸ್ ಮೈಸೂರಿನತ್ತ ತೆರಳಿದೆ. ಮೆಜೆಸ್ಟಿಕ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಖಾಸಗಿ ಬಸ್‌ಗಳ ವ್ಯವಸ್ಥೆ ಸಹ ಮಾಡಲಾಗಿದೆ. ಇತ್ತ, ಮೈಸೂರಿನಲ್ಲೂ ಕೆಲವೇ ಕೆಲವು ಸಿಬ್ಬಂದಿಯನ್ನು ಬಳಸಿಕೊಂಡು ಕೆಲ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಆರಂಭಿಸಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp