ಗುರುವಾರ , ಜುಲೈ 7, 2022
25 °C

ಮಂಗಳೂರು: ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಜುಲೈ 11ರಂದು ಹಸಿರು ನಿಶಾನೆ

ಪಶ್ಚಿಮ ಘಟ್ಟಗಳ ಮೂಲಕ ಸಂಚರಿಸುವಾಗ ರಮಣೀಯ ಪ್ರಾಕೃತಿಕ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಅನುಕೂಲವಾಗುವಂತೆ ವಿಸ್ಟಾಡೋಮ್ ರೈಲಿನ ಸಂಚಾರಕ್ಕೆ ಜುಲೈ 11ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಲಾಗುತ್ತದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಹಾಗೂ ರೈಲ್ವೆ ಅಧಿಕಾರಿಗಳು ಭಾಗವಹಿಸಲಿದ್ದಾರೆ. ವಿಸ್ಟಾಡೋಮ್‌ ಬೋಗಿ ಮಂಗಳೂರಿಗೆ ಬಂದಿದ್ದು, ಉದ್ಘಾಟನೆಗಾಗಿ ಬೋಗಿಯನ್ನು ಶೃಂಗರಿಸಲಾಗುತ್ತಿದೆ.

ಇದನ್ನೂ ಓದಿ: