ಗುರುವಾರ , ಮೇ 13, 2021
17 °C

Video: ಕಲ್ಲು ಹೊಡೆದವರೊಂದಿಗೆ ಸಂಬಂಧವಿಲ್ಲ: ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ನೌಕರರ ಮುಷ್ಕರದ ನಡುವೆಯೂ ಸಂಚರಿಸುತ್ತಿರುವ ಸರ್ಕಾರಿ ಬಸ್ ಗಳಿಗೆ ಕಲ್ಲು ಹೊಡೆದಿರುವವರ ಜತೆ ತಮಗೆ ಯಾವುದೇ ಸಂಬಂಧ ಇಲ್ಲ ಎಂದು ಸಾರಿಗೆ ನಿಗಮಗಳ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು. ರೈತ ಸಂಘದ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತಮಾಡಿದ ಅವರು, 'ನಾವು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದೇವೆ. ಮುಷ್ಕರದ ನಡುವೆಯೂ ಬಸ್ ಗಳು ಸಂಚರಿಸುತ್ತಿರುವ ಕಾರಣದಿಂದ ಅಸಮಾಧಾನಗೊಂಡ ಜನರು ಕಲ್ಲು ತೂರುವ ಕೆಲಸ ಮಾಡಿರಬಹುದು. ಅವರ ಜತೆ ಸಂಬಂಧವಿಲ್ಲ, ಬೆಂಬಲವೂ ಇಲ್ಲ' ಎಂದರು. ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆಗೆ ಆಗ್ರಹಿಸಿ ಸತ್ಯಾಗ್ರಹ ಮುಂದುವರಿಯಲಿದೆ. ಸಾರಿಗೆ ನೌಕರರ ಕೂಟದ ಪ್ರಮುಖರ ಜತೆ ಚರ್ಚಿಸಿ ಹೋರಾಟದ ಮುಂದಿನ ನಡೆ ನಿರ್ಧರಿಸಲಾಗುವುದು ಎಂದು ಹೇಳಿದರು. ಸಾರಿಗೆ ನಿಗಮಗಳ ನೌಕರರಿಗೆ ಶೇಕಡ 20ರಷ್ಟು ವೇತನ ಹೆಚ್ಚಳ ಮತ್ತು ಬಾಕಿ ಮೊತ್ತಕ್ಕೆ ಶೇ 6ರಷ್ಟು ಬಡ್ಡಿ ನೀಡುವಂತೆ 2004ರಲ್ಲಿ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಕ್ರಮ ಕೈಗೊಳ್ಳಬೇಕು ಎಂಬುದು ನೌಕರರ ಬೇಡಿಕೆ ಎಂದು ಹೇಳಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp