ವಿಡಿಯೊ ನೋಡಿ: ಬಸವಕಲ್ಯಾಣದಲ್ಲಿ ಹಣ ಹಂಚಲು ಬಂದವರಿಗೆ ಚಪ್ಪಲಿಯೇಟು!
ಬಸವಕಲ್ಯಾಣ ತಾಲ್ಲೂಕಿನ ತ್ರಿಪುರಾಂತ ಗ್ರಾಮದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚಲು ಬಂದಾಗ ಗ್ರಾಮಸ್ಥರು ಅವನನ್ನು ಹಿಡಿದು ಚಪ್ಪಲಿಯಿಂದ ಹೊಡೆದಿದ್ದಾರೆ. ಗ್ರಾಮಸ್ಥರು ಹಣ ಹಂಚಿಕೆ ಹಾಗೂ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ. ವಿಡಿಯೊ ವೈರಲ್ ಆಗಿದೆ.
ಸುದ್ದಿ ಓದಿ: ಬಸವಕಲ್ಯಾಣ: ಮತದಾರರಿಗೆ ಹಣ ಹಂಚಲು ಬಂದವರಿಗೆ ಚಪ್ಪಲಿಯಿಂದ ಹೊಡೆದ ಗ್ರಾಮಸ್ಥರು