ಶುಕ್ರವಾರ, ಆಗಸ್ಟ್ 7, 2020
22 °C

ಕೂಡಲಸಂಗಮ, ಬಾದಾಮಿ ಬನಶಂಕರಿ ದೇಗುಲ ದರ್ಶನಕ್ಕೆ ಮುಕ್ತ

ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಸಂಗಮೇಶ್ವರ ದೇವಸ್ಥಾನವನ್ನು ಸೋಮವಾರ ಸಾರ್ವಜನಿಕರ ದರ್ಶನಕ್ಕೆ ಮುಕ್ತಗೊಳಿಸಲಾಯಿತು. ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೆ ಮಾತ್ರ ದೇಗುಲ ಪ್ರವೇಶಕ್ಕೆ ಭಕ್ತರಿಗೆ ಕೂಡಲಸಂಗಮ ಅಭಿವೃದ್ಧಿ ಮಂಡಳಿ ಅವಕಾಶ ಕಲ್ಪಿಸಿದೆ. ಇಲ್ಲಿಯವರೆಗೆ 400 ಭಕ್ತರು ದೇವರ ದರ್ಶನ ಮಾಡಿದ್ದಾರೆ. ಬಾದಾಮಿಯ ಬನಶಂಕರಿ ದೇವಿ ದೇಗುಲದಲ್ಲೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. – ಪ್ರಜಾವಾಣಿ ವಿಡಿಯೊ