ಶುಕ್ರವಾರ, ನವೆಂಬರ್ 15, 2019
22 °C

ವಿದ್ಯಾಸಿರಿ ವಿದ್ಯಾರ್ಥಿ ವೇತನ ವಿಳಂಬ: ಕಿಡಿ

Published:
Updated:

ಬೆಂಗಳೂರು: ‘ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಮೆಟ್ರಿಕ್‌ ಪೂರ್ವ, ಮೆಟ್ರಿಕ್‌ ನಂತರ ಹಾಗೂ ವಿದ್ಯಾಸಿರಿ ವಿದ್ಯಾರ್ಥಿವೇತನಗಳು ಇನ್ನೂ ವಿದ್ಯಾರ್ಥಿಗಳಿಗೆ ಮಂಜೂರಾಗಿಲ್ಲ’ ಎಂದು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ದೂರಿದೆ.

‘ಅರ್ಜಿ ಸಲ್ಲಿಸುವ ವೇಳೆ ತಾಂತ್ರಿಕ ದೋಷಗಳು ಹೆಚ್ಚಾಗಿವೆ. ಅರ್ಜಿ ಪರಿಶೀಲನೆ ನಂತರ ಮಂಜೂರಾಗದೇ ವಿಳಂಬ ಮಾಡಲಾಗುತ್ತಿದೆ. ಇದು ಅಲ್ಪಸಂಖ್ಯಾತ ಇಲಾಖೆಯ ವೈಫಲ್ಯ ಎತ್ತಿ ತೋರುತ್ತಿದೆ. ಈ ಬಗ್ಗೆ ಅಧಿಕಾರಿಗಳನ್ನು ಭೇಟಿ ಮಾಡಿದಾಗ ಅಸಡ್ಡೆ ತೋರುತ್ತಾರೆ. ವಿದ್ಯಾರ್ಥಿವೇತನ ಪಡೆಯದ ಕಾರಣ ಕಾಲೇಜಿನ ಶುಲ್ಕ ಪಾವತಿಗೆ ಸಮಸ್ಯೆಯಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪಡೆಯದೆ ಅತಂತ್ರರಾಗಿದ್ದಾರೆ’ ಎಂದು ಸಂಘಟನೆಯ ಪದಾಧಿಕಾರಿಗಳು ದೂರಿದರು.

ಪ್ರತಿಕ್ರಿಯಿಸಿ (+)