ಬುಧವಾರ, ಡಿಸೆಂಬರ್ 11, 2019
24 °C

ವಿಜಯ್ ಮಲ್ಯ ಹಸ್ತಾಂತರ ಕುರಿತ ವಿಚಾರಣೆ: ಲಂಡನ್‌ಗೆ ಸಿಬಿಐ ತಂಡ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾಲ ಮರುಪಾವತಿ ಮಾಡದೆ ಬ್ರಿಟನ್‌ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯರನ್ನು ಭಾರತಕ್ಕೆ ಗಡಿಪಾರು ಮಾಡುವ ವಿಷಯಕ್ಕೆ ಸಂಬಂಧಿಸಿದ ವಿಚಾರಣೆಯಲ್ಲಿ ಭಾಗಿಯಾಗುವ ಸಲುವಾಗಿ ಸಿಬಿಐ ಅಧಿಕಾರಿಗಳ ತಂಡ ಲಂಡನ್‌ಗೆ ತೆರಳಿದೆ.

ಸಿಬಿಐ ಜಂಟಿ ನಿರ್ದೇಶಕ ಎಸ್. ಸಾಯಿ ಮನೋಹರ್, ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳು ತಂಡದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮನೋಹರ್ ಅವರು ಮಲ್ಯ ವಿರುದ್ಧದ ಪ್ರಕರಣದ ವಿಶೇಷ ತನಿಖಾ ತಂಡದ ನೇತೃತ್ವವನ್ನೂ ವಹಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದ ಇದುವರೆಗಿನ ವಿಚಾರಣೆಗಳಲ್ಲಿ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ಪಾಲ್ಗೊಂಡಿದ್ದರು. ಸಿಬಿಐ ಅಂತಃಕಲಹದ ನಂತರ ಅವರನ್ನು ಕೇಂದ್ರ ಸರ್ಕಾರ ಬಲವಂತದ ರಜೆಯಲ್ಲಿ ಕಳುಹಿಸಿದ್ದರಿಂದ ಮನೋಹರ್ ಅವರು ವಿಚಾರಣೆಯಲ್ಲಿ ಭಾಗಿಯಾಗುತ್ತಿದ್ದಾರೆ.

ಮಲ್ಯ ಅವರನ್ನು ಹಸ್ತಾಂತರಿಸುವಂತೆ ಭಾರತದ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಮನವಿ ಲಂಡನ್‌ನ  ವೆಸ್ಟ್‌ ಮಿನ್‌ಸ್ಟರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಇಂದು ವಿಚಾರಣೆಗೆ ಬರಲಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು