ಸೋಮವಾರ, ಆಗಸ್ಟ್ 3, 2020
23 °C

ಮಲ್ಯ ವಿರುದ್ಧ ‘ಚೋರ್‌ ಹೈ’ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಂಡನ್‌: ಭಾನುವಾರ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್‌ ಪಂದ್ಯವನ್ನು ವೀಕ್ಷಿಸಿ ಕ್ರೀಡಾಂಗಣದಿಂದ ಹೊರಬರುತ್ತಿದ್ದ ಉದ್ಯಮಿ ವಿಜಯ್‌ ಮಲ್ಯ ಅವರನ್ನು ನೋಡಿದ ಜನರು ‘ಚೋರ್‌ ಹೈ’ ಎಂದು ಘೋಷಣೆ ಕೂಗಿದ್ದಾರೆ.

ಮಲ್ಯ ಅವರನ್ನು ಸುತ್ತುವರಿದ ಸಣ್ಣ ಗುಂಪು, ‘ಚೋರ್‌ ಹೈ’, ‘ಮನುಷ್ಯನಾಗಿದ್ದರೆ ನೀನು, ನಿನ್ನ ದೇಶದ ಕ್ಷಮೆ ಕೋರು’ ಎಂದು ಘೋಷಣೆ ಕೂಗಿದ್ದು ವಿಡಿಯೊದಲ್ಲಿ ದಾಖಲಾಗಿದೆ. ‘ನಾನು ಪಂದ್ಯ ವೀಕ್ಷಿಸಲು ಇಲ್ಲಿಗೆ ಬಂದಿದ್ದೇನೆ. ನನ್ನ ವಿರುದ್ಧದ ಪ್ರಕರಣ ಕುರಿತು ಜುಲೈನಲ್ಲಿ ನಡೆಯುವ ಮುಂದಿನ ವಿಚಾರಣೆಗೆ ಸಿದ್ಧತೆ ನಡೆದಿವೆ’ ಎಂದು ಅವರು ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ... ಭಾರತ - ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ವೀಕ್ಷಿಸಿದ ವಿಜಯ್ ಮಲ್ಯ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು