‘ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಸಮಸ್ಯೆಯಿದೆ’

7
ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿಕೆ

‘ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಸಮಸ್ಯೆಯಿದೆ’

Published:
Updated:
Prajavani

ವಿಜಯಪುರ: ‘ವಿಜಯಪುರ ಜಿಲ್ಲಾ ಬಿಜೆಪಿ ಘಟಕದಲ್ಲಿ ಭಿನ್ನಮತ, ಅಪಸ್ವರದ ಸಮಸ್ಯೆ ಇರುವುದು ನಿಜ’ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ತಿಳಿಸಿದರು.

‘ಸತ್ಯವನ್ನು ಒಪ್ಕೊಳ್ಳಲೇಬೇಕಿದೆ. ಇಲ್ಲಿನ ಸಮಸ್ಯೆಯನ್ನು ಶೀಘ್ರದಲ್ಲೇ ವರಿಷ್ಠರು ಪರಿಹರಿಸಲಿದ್ದಾರೆ. ಜಿಲ್ಲಾ ಘಟಕಕ್ಕೆ ಅಧ್ಯಕ್ಷರನ್ನು ನೇಮಿಸಲಿದ್ದಾರೆ’ ಎಂದು ಶುಕ್ರವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದರು.

‘ಕಾಂಗ್ರೆಸ್‌, ಜೆಡಿಎಸ್‌ನಲ್ಲಿರುವ ಕುಟುಂಬ ರಾಜಕಾರಣ ಬಿಜೆಪಿಯಲ್ಲಿ ಇಲ್ಲ. ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಲ್ಲ. ಯುವ ಮೋರ್ಚಾವನ್ನು ರಾಜ್ಯದಲ್ಲಿ ಸಂಘಟಿಸುವ ಜವಾಬ್ದಾರಿ ಹೊತ್ತಿದ್ದೇನೆ.

ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಉತ್ತರಾಧಿಕಾರಿ ನಾನಲ್ಲ. ಅವರ ಆಸೆಯಂತೆ, ರಾಜ್ಯದಿಂದ ಹೆಚ್ಚಿನ ಬಿಜೆಪಿ ಸಂಸದರು ಆಯ್ಕೆಯಾಗುವಂತೆ ಸಂಘಟನೆ ಬಲಪಡಿಸುವುದಷ್ಟೇ ನನ್ನ ಕೆಲಸ’ ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಪ್ರತಿಕ್ರಿಯಿಸಿದರು.

ಯುವ ಮೋರ್ಚಾ ಉಪಾಧ್ಯಕ್ಷ ತಮ್ಮೇಶಗೌಡ ಮಾತನಾಡಿ ‘ಯುವ ಮೋರ್ಚಾ ವಿಜಯಲಕ್ಷ್ಯ–2019 ಅಭಿಯಾನ ಆರಂಭಿಸಿದೆ. ಈಗಾಗಲೇ 13 ಜಿಲ್ಲೆಗಳಲ್ಲಿ ಪ್ರವಾಸ ನಡೆದಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ರಾಜ್ಯದ ಎಲ್ಲೆಡೆ ಸಂಘಟನೆ ನಡೆದಿದೆ’ ಎಂದು ತಿಳಿಸಿದರು.

ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಮುಖಂಡರಾದ ವಿಜುಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಶಂಭುಲಿಂಗ ಕಕ್ಕಳಮೇಲಿ, ಸುರೇಶ ಬಿರಾದಾರ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಯುವ ಘಟಕಕ್ಕೆ ಅಧ್ಯಕ್ಷರ ನೇಮಕ: ರವಿ ಖಾನಾಪುರ ರಾಜೀನಾಮೆಯಿಂದ ತೆರವಾಗಿದ್ದ ವಿಜಯಪುರ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರನ್ನಾಗಿ ರಾಜೇಂದ್ರ ವಾಲಿ ಅವರನ್ನು ನೇಮಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ರವಿ ಅನಾರೋಗ್ಯದಿಂದ ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದರು. ಯುವ ಮೋರ್ಚಾದ ಹಾಲಿ ಉಪಾಧ್ಯಕ್ಷರಾಗಿದ್ದ ರಾಜೇಂದ್ರ ವಾಲಿ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !