ವೀಸಾ ಅವಧಿ ಮುಕ್ತಾಯ: ವಿವರಣೆ ಕೇಳಿದ ಹೈಕೋರ್ಟ್‌

ಶನಿವಾರ, ಮಾರ್ಚ್ 23, 2019
24 °C

ವೀಸಾ ಅವಧಿ ಮುಕ್ತಾಯ: ವಿವರಣೆ ಕೇಳಿದ ಹೈಕೋರ್ಟ್‌

Published:
Updated:

ಬೆಂಗಳೂರು: ‘ರಾಜ್ಯದಾದ್ಯಂತ ಎಷ್ಟು ವಿದೇಶಿ ವಿದ್ಯಾರ್ಥಿಗಳ ವೀಸಾ ಅವಧಿ ಮುಗಿದಿದೆ, ಅವರ ವಿರುದ್ಧ ಏನೇನು ಕ್ರಮ ಕೈಗೊಂಡಿದ್ದೀರಿ ಎಂಬ ಮಾಹಿತಿ ನೀಡಿ’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

ಕ್ರಿಮಿನಲ್‌ ಪ್ರಕರಣವೊಂದರಲ್ಲಿ ಆರೋಪಿಯಾಗಿರುವ ಕಾಂಗೊ ದೇಶದ ವಿದ್ಯಾರ್ಥಿ ಹೊಸೈ ಬಿಕಂಡು ಸಿಡ್ನಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಅವರನ್ನು ಕೋರ್ಟ್‌ ಹಾಲ್‌ಗೆ ಕರೆಯಿಸಿಕೊಂಡ ನ್ಯಾಯಪೀಠ, ‘ಈ ವಿಷಯದಲ್ಲಿ ಸರ್ಕಾರ ನೆರವು ನೀಡಬೇಕು’ ಎಂದು ಸೂಚಿಸಿದರು.

‘ರಾಜ್ಯದಲ್ಲಿ 25 ವಿದೇಶಿ ವಿದ್ಯಾರ್ಥಿಗಳು ವೀಸಾ ಅವಧಿ ಮುಗಿದಿದ್ದರೂ ಇಲ್ಲೇ ಇದ್ದಾರೆ. ಇವರಲ್ಲಿ ಬಹುತೇಕರು ತಾಂಜೇನಿಯಾ, ಕಾಂಬೋಡಿಯಾ, ಕಾಂಗೊ ದೇಶದ ವಿದ್ಯಾರ್ಥಿಗಳಾಗಿದ್ದಾರೆ. ಬಹುತೇಕರು ಮಾದಕ ದ್ರವ್ಯ ಕಳ್ಳ ಸಾಗಣೆಯಂತಹ ಕ್ರಿಮಿನಲ್‌ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಇದು ಗಂಭೀರ ವಿಚಾರ’ ಎಂದು ನ್ಯಾಯಮೂರ್ತಿಗಳು ಆತಂಕ ವ್ಯಕ್ತಪಡಿಸಿದರು.

ವಿಚಾರಣೆಯನ್ನು ಏಪ್ರಿಲ್‌ 5ಕ್ಕೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !