ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

ಸೋಮವಾರ, ಮೇ 20, 2019
30 °C

ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

Published:
Updated:
Prajavani

ವಿಜಯಪುರ: ‘ಸುಪ್ರೀಂಕೋರ್ಟ್‌ ಆದೇಶದಂತೆ, ಈ ಬಾರಿಯ ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ, ಪ್ರತಿ ವಿಧಾನಸಭಾ ಕ್ಷೇತ್ರದ ಐದು ವಿ.ವಿ ಪ್ಯಾಟ್ ಮತಗಳ ಎಣಿಕೆ ಮಾಡಿ, ಮತ ಯಂತ್ರಗಳಲ್ಲಿನ ಮತಗಳ ಜತೆಗೆ ತಾಳೆ ಮಾಡಿದ ಬಳಿಕ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅವರು ಮಾತನಾಡಿದರು.

‘ಮೊದಲು ಅಂಚೆ ಮತಗಳ ಎಣಿಕೆ ನಂತರ ಇವಿಎಂ ಮತಗಳ ಎಣಿಕೆ ನಡೆಯಲಿದೆ. ಇದಾದ ನಂತರ ವಿವಿ ಪ್ಯಾಟ್‌ಗಳ ಮತಗಳನ್ನು ಇವಿಎಂ ಮತಗಳೊಂದಿಗೆ ತಾಳೆ ಮಾಡಿ ಅಧಿಕೃತ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ತಿಳಿಸಿದರು.

‘ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಮತ ಎಣಿಕೆಗೆ ಅವಶ್ಯಕವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಮೇ 21ಕ್ಕೆ ಇಬ್ಬರೂ ವೀಕ್ಷಕರು ಸಹ ಜಿಲ್ಲೆಗೆ ಬರಲಿದ್ದು, ‌ಅವರ ಸಮಕ್ಷಮ ಮತ ಎಣಿಕೆಗೆ ಸಂಬಂಧಿಸಿದಂತೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಅಗತ್ಯ ಸುರಕ್ಷತಾ ಕ್ರಮಗಳನ್ನು ಸಹ ಕೈಗೊಳ್ಳಲಾಗುತ್ತಿದ್ದು, ಭದ್ರತಾ ಕೊಠಡಿಗಳಿಗೆ ಸಂಬಂಧಪಟ್ಟಂತೆ ಸಿ.ಸಿ.ಟಿ.ವಿ ಕ್ಯಾಮೆರಾಗಳ ಮೂಲಕ ನಿರಂತರ ಕಣ್ಗಾವಲು ಇಡಲಾಗಿದ್ದು, ದೃಶ್ಯಗಳ ದಾಖಲೀಕರಣ ಕಾರ್ಯ ನಡೆಯುತ್ತಿದೆ’ ಎಂದು ಹೇಳಿದರು.

‘ಆಯಾ ರಾಜಕೀಯ ಪಕ್ಷಗಳು ತಕ್ಷಣ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ 14 ಟೇಬಲ್‌ಗಳಲ್ಲಿ ಮತ ಎಣಿಕೆ ಏಜೆಂಟರನ್ನು ನೇಮಿಸಿಕೊಳ್ಳಬೇಕು. ಅವರಿಗೆ ಮತ ಎಣಿಕೆ ದಿನ ಸೈನಿಕ ಶಾಲೆಯ 2ನೇ ಗೇಟ್ ಮೂಲಕ ಹಾಗೂ ಅಭ್ಯರ್ಥಿ ಮತ್ತು ನಿಯೋಜಿತ ಚುನಾವಣಾ ಏಜೆಂಟರುಗಳಿಗೆ ಮುಖ್ಯ ಗೇಟ್ ಮೂಲಕ ಪ್ರವೇಶಾವಕಾಶ ಕಲ್ಪಿಸಲಾಗುತ್ತದೆ. ಮತ ಎಣಿಕೆ ಸಂದರ್ಭದಲ್ಲಿ ಪ್ರತಿಯೊಂದು ವಿಷಯವನ್ನು ವೀಕ್ಷಕರ ಗಮನಕ್ಕೆ ತಂದು ಶಿಸ್ತುಬದ್ಧವಾಗಿ ಫಲಿತಾಂಶ ಪ್ರಕಟಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !