‘ಆದಿವಾಸಿ ಪ್ರದೇಶಗಳಿಗೆ ಶೀಘ್ರ ಭೇಟಿ’

7

‘ಆದಿವಾಸಿ ಪ್ರದೇಶಗಳಿಗೆ ಶೀಘ್ರ ಭೇಟಿ’

Published:
Updated:

ಬೆಂಗಳೂರು: ‘ಆದಿವಾಸಿ ಜನರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಬದ್ಧ. ಶೀಘ್ರದಲ್ಲೇ ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಭೇಟಿ ನೀಡಿ ಆದಿವಾಸಿ ಜನರ ಸಮಸ್ಯೆ ಆಲಿಸುತ್ತೇನೆ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಆದಿವಾಸಿಗಳ ಸಮಸ್ಯೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅರಣ್ಯ ಹಕ್ಕುಗಳ ಕಾಯ್ದೆ 2006 ಅಂಗೀಕಾರವಾಗಿ 12 ವರ್ಷಗಳು ಕಳೆದಿವೆ. ಬಹುತೇಕ ಆದಿವಾಸಿಗಳಿಗೆ ಭೂಮಿಯ ಹಕ್ಕು ಪಡೆಯಲು ಸಾಧ್ಯವಾಗಿಲ್ಲ. ಈ ಗೊಂದಲಗಳ ನಿವಾರಣೆ, ಶಿಕ್ಷಣ, ಉದ್ಯೋಗ ಹಾಗೂ ಇತರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ತಲುಪಿಸಲು ತೀರ್ಮಾನ ಕೈಗೊಳ್ಳಲು ಕಂದಾಯ, ಅರಣ್ಯ, ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು’ ಎಂದರು.

ಆದಿವಾಸಿ ರಾಷ್ಟ್ರೀಯ ಮಂಚ್‌ನ ರಾಷ್ಟ್ರೀಯ ಸಂಚಾಲಕ ಜಿತೇಂದ್ರ ಚೌಧರಿ, ಆದಿವಾಸಿ ಸಮನ್ವಯ ಸಮಿತಿಯ ಸಂಚಾಲಕ ವೈ.ಕೆ.ಗಣೇಶ್, ಸಹಸಂಚಾಲಕ ಎಸ್.ವೈ.ಗುರುಶಾಂತ್ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !