‘ಪ್ರಜಾವಾಣಿ’ ಸಾಧಕಿಯರು. ಎರಡು ವರ್ಷಗಳಿಂದ ಪ್ರಜಾವಾಣಿ ಪತ್ರಿಕೆ ಅತ್ಯಂತ ಖುಷಿಯಿಂದ ನಡೆಸಿಕೊಂಡು ಬರುತ್ತಿರುವ ಕಾರ್ಯಕ್ರಮ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ, ಬೇರೆ ಬೇರೆ ಕ್ಷೇತ್ರಗಳಿಂದ ಸಾಧಕಿಯರನ್ನು ಆಯ್ಕೆ ಮಾಡುವ ಪ್ರಕ್ರಿಯೆಯೇ ವಿಶಿಷ್ಟ. ಈಗಾಗಲೇ, ಸಮಾಜಕ್ಕೆ ಉತ್ತಮ ಕೊಡುಗೆ ನೀಡಿರುವ ಸಾಧಕಿಯರೇ ತೀರ್ಪುಗಾರರಾಗಿ 10 ಸಾಧಕಿಯರನ್ನು ಆಯ್ಕೆ ಮಾಡಿದ್ದಾರೆ. ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಸ್. ಮುದಗಲ್, ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಹಿರಿಯ ಕಲಾವಿದೆ ಬಿ. ಜಯಶ್ರೀ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕ್ಕೈ ಪದ್ಮಶಾಲಿ ತೀರ್ಪುಗಾರರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.