ಶನಿವಾರ, ಡಿಸೆಂಬರ್ 7, 2019
21 °C
ವಿಜಯಪುರ ಜಿಲ್ಲೆಯ ನಾಗರಿಕರಿಗೆ ಸಹಕರಿಸಲು ಮನವಿ ಮಾಡಿದ ಜಿಲ್ಲಾಧಿಕಾರಿ

ಮಕ್ಕಳ ಮೇಲಿನ ಶೋಷಣೆ ತಡೆಗಟ್ಟಲು ಕೈ ಜೋಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ವಿಜಯಪುರ: ‘ಮಕ್ಕಳ ಹಕ್ಕುಗಳ ಸಂರಕ್ಷಣೆ ಜತೆಗೆ ಮಕ್ಕಳ ವಿರುದ್ಧ ಆಗುವ ಶೋಷಣೆ ಹಾಗೂ ದೌರ್ಜನ್ಯ ನಿಯಂತ್ರಣಕ್ಕೆ ಪ್ರತಿಯೊಬ್ಬ ನಾಗರಿಕ ಕೈಜೋಡಿಸಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಮನವಿ ಮಾಡಿದರು.

ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಕಾನೂನುಗಳು ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದಾಗ ಮಾತ್ರ ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಸಾಧ್ಯವಿದೆ’ ಎಂದು ಹೇಳಿದರು.

ಜಿ.ಪಂ. ಸಿಇಓ ವಿಕಾಸ್‌ ಕಿಶೋರ್‌ ಸುರಳಕರ್‌, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ವನಿತಾ ತೊರವಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ ಮಾತನಾಡಿದರು. ಆರ್.ಟಿ.ಇ. ಸಂಯೋಜಕ ಲಕ್ಷ್ಮಿಪ್ರಸನ್ನ ಮಕ್ಕಳ ಹಕ್ಕುಗಳ ಹಾಗೂ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.

ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪುರ ಸ್ವಾಗತಿಸಿ, ವಂದಿಸಿದರು. ಇದೇ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತಂತೆ ಸಂದಿಗ್ಧ ಚಲನಚಿತ್ರ ಪ್ರದರ್ಶಿಸಲಾಯಿತು.

ಪ್ರತಿಕ್ರಿಯಿಸಿ (+)