ಶುಕ್ರವಾರ, ಜೂನ್ 25, 2021
21 °C

ಆ್ಯಮ್‌ಸ್ಟರ್‌ಡಾಂ: ಇರಿತದಿಂದ ಒಬ್ಬ ಸಾವು, ನಾಲ್ವರಿಗೆ ಗಾಯ– ಶಂಕಿತನ ಬಂಧನ

ಎಪಿ Updated:

ಅಕ್ಷರ ಗಾತ್ರ : | |

Prajavani

ಆ್ಯಮ್‌ಸ್ಟರ್‌ಡಾಂ: ನಗರದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ಇರಿತಕ್ಕೆ ಒಳಗಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಶಂಕಿತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

‘ಇದು ಭಯೋತ್ಪಾದನಾ ಕೃತ್ಯ ಎಂದು ಈಗಲೇ ಹೇಳಲಾಗದು. ಆದರೆ, ಘಟನೆ ಕುರಿತಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದ್ದಾರೆ.

ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತ ವ್ಯಕ್ತಿ 29 ವರ್ಷದವನಾಗಿದ್ದು, ಹೊರವಲಯದ ಆಮ್‌ಸ್ಟಲ್‌ವೀನ್‌ ಪಟ್ಟಣದ ನಿವಾಸಿಯಾಗಿದ್ದಾನೆ ಎಂದೂ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು