ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಅಗ್ನಿ ಅನಾಹುತ: 10 ಮಂದಿ ಸಾವು

Last Updated 17 ಮಾರ್ಚ್ 2023, 9:21 IST
ಅಕ್ಷರ ಗಾತ್ರ

ಪೆಶಾವರ: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುನ್‌ಖ್ವಾ ಪ್ರಾಂತ್ಯದ ಪರ್ವತ ಜಿಲ್ಲೆಯಲ್ಲಿ ಬೆಂಕಿ ಹೊತ್ತಿಕೊಂಡು ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ಕನಿಷ್ಠ 10 ಜನ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಸಂಭವಿಸಿದೆ. ದುರ್ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಮೃತರು ಮತ್ತು ಗಾಯಗೊಂಡವರು ಒಂದೇ ಕುಟುಂಬಕ್ಕೆ ಸೇರಿದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ಮೂವರನ್ನು ರಕ್ಷಿಸಲಾಗಿದೆ. ಗಾಯಾಳುಗಳು ಹಾಗೂ ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT