ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ವಾಲ್‌ಮಾರ್ಟ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು

Last Updated 23 ನವೆಂಬರ್ 2022, 9:15 IST
ಅಕ್ಷರ ಗಾತ್ರ

ವರ್ಜಿನಿಯಾ: ಚೆಸಾಪೀಕ್ ನಗರದ ಸ್ಯಾಮ್‌ ಸರ್ಕಲ್‌ನ ವಾಲ್‌ಮಾರ್ಟ್‌ ಮಳಿಗೆಯಲ್ಲಿ ಬಂದೂಕುದಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದು ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ. ದಾಳಿ ನಡೆಸಿದ ವ್ಯಕ್ತಿ ಕೂಡ ಮೃತಪಟ್ಟಿದ್ದಾನೆಂದು ಪೊಲೀಸರು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ವರ್ಜೀನಿಯಾ ರಾಜ್ಯದ ಸೆನೆಟರ್ ಲೂಯಿಸ್ ಲ್ಯೂಕಾಸ್, ‘ಅಮೆರಿಕದ ಇತ್ತೀಚಿನ ಸಾಮೂಹಿಕ ಗುಂಡಿನ ದಾಳಿ ಇಂದು ರಾತ್ರಿ ವರ್ಜೀನಿಯಾದ ಚೆಸಾಪೀಕ್‌ನಲ್ಲಿರುವ ‌ತಮ್ಮ ಜಿಲ್ಲೆಯ ವಾಲ್‌ಮಾರ್ಟ್‌ನಲ್ಲಿ ನಡೆದಿರುವುದು ದುರದೃಷ್ಟಕರ. ಈ ಹಿಂಸಾಚಾರದ ಸಾಂಕ್ರಾಮಿಕ ರೋಗವನ್ನು ಕೊನೆಗೊಳಿಸಲು ಪರಿಹಾರಗಳನ್ನು ಕಂಡುಕೊಳ್ಳುವವರೆಗೂ ವಿಶ್ರಮಿಸುವುದಿಲ್ಲ’ ಎಂದಿದ್ದಾರೆ.

ಕ್ಷಿಪ್ರ ಕಾರ್ಯಾಚರಣೆಯ ಫಲವಾಗಿ ಹಲವರನ್ನು ಪ್ರಾಣಾಪಾಯದಿಂದ ರಕ್ಷಿಸಲು ಸಾಧ್ಯವಾಯಿತು. ಒಬ್ಬ ವ್ಯಕ್ತಿ ಮಾತ್ರ ದಾಳಿ ನಡೆಸಿದ್ದು, ಆತನು ಕೂಡ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಆತ ಹೇಗೆ ಮೃತಪಟ್ಟಿದ್ದಾನೆ, ಪೊಲೀಸರ ಗುಂಡೇಟಿಗೆ ಬಲಿಯಾದನೇ ಎಂಬ ಕುರಿತು ಯಾವುದೇ ಮಾಹಿತಿ ನೀಡಿಲ್ಲ.

ಇತ್ತೀಚಿನ ದಿನಗಳಲ್ಲಿ ಅಮೆರಿಕದಲ್ಲಿ ಈ ರೀತಿ ದಾಳಿಗಳು ಹೆಚ್ಚುತ್ತಿವೆ. ಕಳೆದಶನಿವಾರ ನಗರದ ಎಲ್‌ಜಿಬಿಟಿಕ್ಯು ಕ್ಲಬ್‌ನಲ್ಲಿ ಇದೇ ರೀತಿ ಗುಂಡಿನ ದಾಳಿ ನಡೆದಿದ್ದು, ಐವರು ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT