ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ ಜಿಯಾಂಗ್ಸು ಪ್ರಾಂತ್ಯದಲ್ಲಿ ಟ್ರಕ್‌–ಬಸ್‌ ಡಿಕ್ಕಿ: 11 ಮಂದಿ ದುರ್ಮರಣ

Last Updated 4 ಏಪ್ರಿಲ್ 2021, 6:55 IST
ಅಕ್ಷರ ಗಾತ್ರ

ಬೀಜಿಂಗ್‌: ಪೂರ್ವ ಚೀನಾದ ಜಿಯಾಂಗ್ಸು ಪ್ರಾಂತ್ಯದಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಟ್ರಕ್‌ ಮತ್ತು ಬಸ್‌ ನಡುವೆ ಡಿಕ್ಕಿ ಸಂಭವಿಸಿದೆ. ಇದರಲ್ಲಿ 11 ಮಂದಿ ಮೃತಪಟ್ಟಿದ್ದು, 19 ಜನರಿಗೆ ಗಾಯಗಳಾಗಿವೆ.

‘ನಿಯಂತ್ರಣ ತಪ್ಪಿ ಟ್ರಕ್‌ ರಸ್ತೆ ವಿಭಜಕವನ್ನು ದಾಟಿ ಬಂದು ಶೆನ್ಯಾಂಗ್-ಹೈಕೌ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಪಲ್ಟಿಯಾದ ಬಸ್‌, ಇತರೆ ಎರಡು ಟ್ರಕ್‌ಗಳಿಗೆ ಗುದ್ದಿದೆ ’ ಎಂದು ಸರ್ಕಾರಿ ಸುದ್ದಿ ಸಂಸ್ಥೆ ಶಿನ್ಹುವಾ ವರದಿ ಮಾಡಿದೆ.

‘ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಬಗ್ಗೆ ವಿಚಾರಣೆ ಮುಂದುವರಿದಿದೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT