ಶುಕ್ರವಾರ, ಜುಲೈ 1, 2022
21 °C
27 ಜನರು ನಾಪತ್ತೆ ನೇಪಾಳ ಸೇನೆಯಿಂದ ಶೋಧ ಕಾರ್ಯ

ನೇಪಾಳ ಭೂಕುಸಿತ: 11 ಜನರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಕಠ್ಮಂಡು: ನೇಪಾಳದ ಸಿಂಧುಪಲ್‌ಚೌಕ್‌ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸುರಿದ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ 11 ಜನರು ಮೃತಪಟ್ಟಿದ್ದು, 27 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. 

ಕಠ್ಮಂಡುವಿನಿಂದ ಈ ಜಿಲ್ಲೆ 130 ಕಿ.ಮೀ. ದೂರದಲ್ಲಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐವರನ್ನು ನೇಪಾಳ ಸೇನೆಯು ಹೆಲಿಕಾಪ್ಟರ್‌ ಮೂಲಕ ಏರ್‌ಲಿಫ್ಟ್‌ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಐದು ಮಕ್ಕಳು ಹಾಗೂ ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರ ಮೃತದೇಹ ಪತ್ತೆಯಾಗಿದೆ ಎಂದು ಎಸ್‌ಪಿ ಮಾಧವ್‌ ಪ್ರಸಾದ್‌ ತಿಳಿಸಿದ್ದಾರೆ ಎಂದು ಕಠ್ಮಂಡು ಪೋಸ್ಟ್‌ ವರದಿ ಮಾಡಿದೆ.

ಭೂಕುಸಿತದಿಂದಾಗಿ 13 ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಐದು ಕುಟುಂಬದ 27 ಜನರು ನಾಪತ್ತೆಯಾಗಿದ್ದಾರೆ. ಈ ಪ್ರದೇಶದಲ್ಲಿ ಮತ್ತೆ ಭೂಕುಸಿತ ಸಂಭವಿಸುವ ಸಾಧ್ಯತೆಗಳಿದ್ದು, ಇನ್ನೂ 25–30 ಮನೆಗಳು ಅಪಾಯದ ಅಂಚಿನಲ್ಲಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ನೇಪಾಳ ಸೇನೆಯ ಯೋಧರು ಹಾಗೂ ಪೊಲೀಸರು ಶೋಧ ಕಾರ್ಯ ಹಾಗೂ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.   

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು