ಬುಧವಾರ, ಸೆಪ್ಟೆಂಬರ್ 30, 2020
20 °C
ಸಿಂಗಪುರದಲ್ಲಿ ಆರೋಗ್ಯ ಸಚಿವಾಲಯ ಆದೇಶ

ಸಿಂಗಪುರ: ಕೋವಿಡ್‌ ಪರೀಕ್ಷೆಗೊಳಪಡದ 13 ಸಾವಿರ ಕಾರ್ಮಿಕರಿಗೆ ಕೆಲಸವಿಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸಿಂಗಪುರ: 14 ದಿನಕ್ಕೊಮ್ಮೆ ಕಡ್ಡಾಯವಾಗಿ ಕೋವಿಡ್‌–19 ಪರೀಕ್ಷೆಗೆ ಒಳಪಡದೇ ಇದ್ದ 13 ಸಾವಿರಕ್ಕೂ ಅಧಿಕ ವಿದೇಶಿ ಕಾರ್ಮಿಕರಿಗೆ ಕೆಲಸಕ್ಕೆ ಮತ್ತೆ ಹಾಜರಾಗುವ ಅವಕಾಶ ನಿರಾಕರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. 

‘ಇತರೆ ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ, ಈ ನಿರ್ಧಾರ ಕೈಗೊಳ್ಳಲಾಗಿದೆ. ಕೋವಿಡ್‌–19 ಪರೀಕ್ಷೆಗೆ ಒಳಪಡದೇ ಇದ್ದ ಕಾರ್ಮಿಕರನ್ನು ‘ಕೆಂಪು’ ವಿಭಾಗದಲ್ಲಿ ಇರಿಸಲಾಗಿದೆ. ಅವರು ಕೆಲಸಕ್ಕೆ ಹಾಜರಾಗುವಂತಿಲ್ಲ’ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

ಸೆ.5 ಪರೀಕ್ಷೆಗೆ ಒಳಪಡಲು ಕೊನೆಯ ದಿನವಾಗಿತ್ತು. ಈ ಕಾರ್ಮಿಕರು ಪರೀಕ್ಷೆಗೆ ಒಳಪಟ್ಟ ನಂತರ ಅವರಿಗೆ ಕೆಲಸಕ್ಕೆ ಮರಳಲು ಅನುಮತಿ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕಾರ್ಮಿಕರ ಪೈಕಿ ಬಹುತೇಕರು ಭಾರತೀಯರಾಗಿದ್ದಾರೆ. ಸೆ.5ರೊಳಗಾಗಿ ಸಿಬ್ಬಂದಿಗೆ ಕೋವಿಡ್‌–19 ಪರೀಕ್ಷೆಗೆ ಒಳಪಡುವಂತೆ ಸೂಚಿಸಲು ಕಂಪನಿಗಳು ಹಾಗೂ ಸಂಸ್ಥೆಗಳಿಗೆ ಕಟ್ಟಡ ನಿರ್ಮಾಣ ಪ್ರಾಧಿಕಾರ, ಮಾನವ ಸಂಪನ್ಮೂಲ ಸಚಿವಾಲಯ ಹಾಗೂ ಆರೋಗ್ಯ ಸಚಿವಾಲಯವು ಸೂಚಿಸಿತ್ತು. ಸಿಂಗಪುರದಲ್ಲಿ ಮಂಗಳವಾರ 47 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 57,091ಕ್ಕೆ ಏರಿಕೆಯಾಗಿದೆ.   

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು