ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೊಹಾನ್ಸ್‌ಬರ್ಗ್‌ನ ಬಾರ್‌ನಲ್ಲಿ ಗುಂಡಿನ ದಾಳಿ; 14 ಜನ ದಾರುಣ ಸಾವು

Last Updated 10 ಜುಲೈ 2022, 9:33 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್‌: ಬಾರ್ ಹಾಗೂ ರೆಸ್ಟೋರೆಂಟ್ ಒಂದರಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಗೆ 14 ಜನ ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ನಗರದ ಹೊರವಲಯದ ಬಾರ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಜನರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿ ಆಗಂತುಕರು ಪರಾರಿಯಾಗಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಕ್ರಿಸ್ ಹನಿ ಭಾರ್ಗವನಾಥ್ ಆಸ್ಪತ್ರೆಗೆ ರವಾನಿಸಲಾಗಿದೆ.

ಹಂತಕರು ಗುಂಡಿನ ದಾಳಿ ಏತಕ್ಕಾಗಿ ನಡೆಸಿದ್ದಾರೆ ಎಂಬುದು ಇದುವರೆಗೆ ತಿಳಿದು ಬಂದಿಲ್ಲ. ತನಿಖೆಯನ್ನು ತೀವ್ರಗೊಳಿಸಲಾಗಿದೆ. ಒಂದು ಮಿನಿ ಬಸ್ ಹಾಗೂ ಜೀಪ್‌ನಲ್ಲಿ ಬಂದಿದ್ದ 10 ರಿಂದ 15 ಜನ ಈ ಕೃತ್ಯ ಎಸಗಿದ್ದಾರೆ ಎಂದು ಜೋಹಾನ್ಸ್‌ಬರ್ಗ್‌ನ ‍ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.

ಅಧಿಕೃತವಾಗಿ ನಡೆಯುತ್ತಿದ್ದ ರೆಸ್ಟೋರೆಂಟ್‌ನಲ್ಲಿ ಮಕ್ಕಳು, ಯುವಕ–ಯುವತಿಯರು ಯಾವುದೇ ಕಾನೂನು ಉಲ್ಲಂಘನೆ ಮಾಡದೇ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎಂದು ಕಮೀಷನರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT