ಶನಿವಾರ, ಮೇ 21, 2022
28 °C

ಅಮೆರಿಕ: ಓಮೈಕ್ರಾನ್‌ ಮೊದಲ ಪ್ರಕರಣ ಪತ್ತೆ

ಎಪಿ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌ (ಎಪಿ): ಕ್ಯಾಲಿಫೋರ್ನಿಯಾದಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್‌ ರೂಪಾಂತರ ತಳಿ ಓಮೈಕ್ರಾನ್‌  ಕಾಣಿಸಿಕೊಂಡಿದೆ. ಇದು ಅಮೆರಿಕದಲ್ಲಿ ವರದಿಯಾದ ಮೊದಲ ಪ್ರಕರಣ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. 

ಕೋವಿಡ್‌ನ ಹೊಸ ತಳಿಯಿಂದ ಎದುರಾಗಬಹುದಾದ ಅಪಾಯಗಳ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸುತ್ತಿರುವ ಹೊತ್ತಿನಲ್ಲೇ ಈ ಪ್ರಕರಣ ಪತ್ತೆಯಾಗಿದೆ. 

ಓಮೈಕ್ರಾನ್‌ ಮೊದಲ ಪ್ರಕರಣ ಪತ್ತೆಯಾದ ದಕ್ಷಿಣ ಆಫ್ರಿಕಾದಿಂದ ಅಮೆರಿಕ ಪ್ರಯಾಣವನ್ನು ನಿರ್ಬಂಧಿಸಿತ್ತು. ಹಲವು ದೇಶಗಳಲ್ಲೂ 10ಕ್ಕೂ ಹೆಚ್ಚು ಓಮೈಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ.  

ಮುನ್ನೆಚ್ಚರಿಕೆಯಾಗಿ ಅಮೆರಿಕ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕಠಿಣ ನಿರ್ಬಂಧಗಳನ್ನು ವಿಧಿಸಿದೆ. ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಕೋವಿಡ್‌ ಪರೀಕ್ಷಾ ನಿಯಮಗಳನ್ನು ಬಿಗಿಗೊಳಿಸಲು ಕ್ರಮಕೈಗೊಂಡಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು