ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಜಿಲೆಂಡ್: ಚಾಕುವಿನಿಂದ ಇರಿದು ಇಬ್ಬರ ಹತ್ಯೆ

Last Updated 19 ಮಾರ್ಚ್ 2021, 5:37 IST
ಅಕ್ಷರ ಗಾತ್ರ

ವೆಲ್ಲಿಂಗ್ಟನ್‌: ‘ನ್ಯೂಜಿಲೆಂಡ್‌ನ ಅಕ್ಲೆಂಡ್‌ನ ಮನೆಯೊಂದರಲ್ಲಿ ಶುಕ್ರವಾರ ದಾಳಿ ನಡೆದಿದ್ದು, ಇದರಲ್ಲಿ ಇಬ್ಬರನ್ನು ಚಾಕುವಿನಿಂದ ಇರಿದು ಹತ್ಯೆಗೈಯಲಾಗಿದೆ. ಮತ್ತೊಬ್ಬರ ಪರಿಸ್ಥಿತಿ ಗಂಭೀರವಾಗಿದೆ’ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದರು.

‘ಈ ಘಟನೆಯಲ್ಲಿ ಗಾಯಗೊಂಡಿದ್ದ ನಾಲ್ಕನೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೇ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಅವರನ್ನು ವಿಚಾರಿಸಲಾಗುತ್ತಿದೆ’ ಎಂದು ಡಿಟೆಕ್ಟಿವ್‌ ಇನ್‌ಸ್ಪೆಕ್ಟರ್‌ ಸ್ಕಾಟ್‌ ಬಿಯರ್ಡ್‌ ಹೇಳಿದರು.

‘ಶುಕ್ರವಾರ ಬೆಳಿಗ್ಗೆ 11.30 ಕ್ಕೆ ಎ‍ಪ್ಸಮ್‌ ಉಪನಗರದ ಮನೆಯೊಂದರಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಕರೆ ಬಂದಿತ್ತು. ಮಹಿಳೆ ಸೇರಿದಂತೆ ವ್ಯಕ್ತಿಯೊಬ್ಬನಿಗೆ ಸ್ಥಳದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು. ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

‘ಈ ಘಟನೆಯಲ್ಲಿ ಭಾಗಿಯಾಗಿದ್ದ ನಾಲ್ಕು ಮಂದಿ ಪರಸ್ಪರ ಒಬ್ಬರನ್ನೊಬ್ಬರು ತಿಳಿದಿರುವಂತೆ ಕಾಣಿಸುತ್ತದೆ. ತನಿಖೆಯು ಆರಂಭಿಕ ಹಂತದಲ್ಲಿದೆ. ಹಾಗಾಗಿ ಹತ್ಯೆಯ ಹಿಂದಿನ ಕಾರಣ ಏನೆಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT