ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಆಡಳಿತಾರೂಢ ಪಕ್ಷದ ಇಬ್ಬರು ಸಂಸದರ ಬಂಧನ

ಮೇ 9ರಂದು ನಡೆದ ಹಿಂಸಾಚಾರದಲ್ಲಿ ಭಾಗಿಯಾದ ಆರೋಪ
Last Updated 17 ಮೇ 2022, 16:23 IST
ಅಕ್ಷರ ಗಾತ್ರ

ಕೊಲಂಬೊ(ಪಿಟಿಐ): ಸರ್ಕಾರದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಆಡಳಿತಾರೂಢ ಪಕ್ಷದ ಇಬ್ಬರು ಸಂಸದರನ್ನು ಮಂಗಳವಾರ ಬಂಧಿಸಲಾಗಿದೆ. ‌

ಸನತ್‌ ನಿಶಾಂತ ಮತ್ತು ಮಿಲನ್‌ ಜಯತಿಲಕೆ ಬಂಧಿತ ಸಂಸದರು. ಇಬ್ಬರೂ ದಾಳಿಕೋರರೊಂದಿಗೆ ಕಾಣಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾದಲ್ಲಿ ಸರ್ಕಾರದ ವಿರುದ್ಧ ಕಳೆದ ಮೇ 9ರಂದು ಇಲ್ಲಿನ ಟೆಂಪಲ್ ಟ್ರೀ ಬಳಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಸರ್ಕಾರದ ಬೆಂಬಲಿಗ ಗುಂಪೊಂದು ಪ್ರತಿಭಟನಕಾರರ ಮೇಲೆ ತೀವ್ರ ದಾಳಿ ನಡೆಸಿತ್ತು. ಘಟನೆಯಲ್ಲಿ 200 ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT