ಲಾಹೋರ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಬಸ್ ಹಾಗೂ ತೈಲ್ ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ 20 ಜನ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಲಾಹೋರ್ನಿಂದ 350 ಕಿಮೀ ದೂರ ಇರುವ ಮುಲ್ತಾನ್–ಸುಕ್ಕೂರ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ಈ ದುರ್ಘಟನೆ ನಡೆದಿದೆ. ಟ್ರಕ್ ಕರಾಚಿಯಿಂದ ಲಾಹೋರ್ಗೆ ತೆರಳುತಿತ್ತು. ಬಸ್ ಲಾಹೋರ್ನಿಂದ ಮುಲ್ತಾನ್ ನಗರಕ್ಕೆ ಹೊರಟಿತ್ತು.

ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗವೇ ಈ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಪರಿಹಾರ ಕಾರ್ಯಾಚರಣೆ ಕೈಗೊಂಡರು.

ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 20ಜನ ಸುಟ್ಟು ಕರಕಲಾಗಿದ್ದು, ಗುರುತು ಹಿಡಿಯಲು ಸಾಧ್ಯ ಆಗುತ್ತಿಲ್ಲ. ಡಿಎನ್ಎ ವರದಿ ನಂತರ ಶವಗಳನ್ನು ಕುಟುಂಬಗಳಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮೂರು ದಿನದಲ್ಲಿ ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಎರಡನೇ ದೊಡ್ಡ ಅಪಘಾತ ಇದಾಗಿದೆ. ಭಾನುವಾರ ಪಂಜಾಬ್ ಪ್ರಾಂತ್ಯದಲ್ಲಿ ಸಂಭವಿಸಿದ್ದ ಅಪಘಾತದಲ್ಲಿ 13 ಜನ ಮೃತಪಟ್ಟಿದ್ದರು.

ಕೀನ್ಯಾ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ರುಟೊ: ಒಡಿಂಗಾಗೆ ಮುಖಭಂಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.