ಮಂಗಳವಾರ, ಫೆಬ್ರವರಿ 7, 2023
27 °C

2022 ಭಾರತ-ಅಮೆರಿಕ ಬಾಂಧವ್ಯದಲ್ಲಿ ಮಹತ್ತರ ವರ್ಷ: ಶ್ವೇತಭವನ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಭಾರತ-ಅಮೆರಿಕ ದ್ವಿಪಕ್ಷೀಯ ಬಾಂಧವ್ಯದ ಇತಿಹಾಸದಲ್ಲಿ 2022 ಮಹತ್ತರ ವರ್ಷವಾಗಿದ್ದು, ಮುಂದಿನ ವರ್ಷ ಮತ್ತಷ್ಟು ಎತ್ತರಕ್ಕೆ ಬೆಳೆಯಲಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶ್ವೇತಭವನದ ಪ್ರಿನ್ಸಿಪಾಲ್ ಡೆಪ್ಯೂಟಿ ನ್ಯಾಷನಲ್ ಸೆಕ್ಯೂರಿಟಿ ಅಡ್ವೈಸರ್ ಜಾನ್ ಫೈನರ್, ಇತ್ತೀಚೆಗೆ ಅಂತ್ಯಗೊಂಡ ಜಿ20 ಶೃಂಗಸಭೆಯಲ್ಲಿ ಒಮ್ಮತವನ್ನು ರೂಪಿಸುವಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ವಹಿಸಿದ್ದ ಪಾತ್ರವನ್ನು ಕೊಂಡಾಡಿದರು.

ಇದನ್ನೂ ಓದಿ: 

ಭಾರತೀಯ ರಾಯಭಾರ ಕಚೇರಿಯು ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾರತೀಯ ಮೂಲದ ಅಮೆರಿಕದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಜಾಗತಿಕ ಅಜೆಂಡಾ ಮುಂದುವರಿಸಲು ನಿಜವಾದ ಜೊತೆಗಾರರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹುಡುಕುತ್ತಿರುವಾಗ ಆ ಪಟ್ಟಿಯಲ್ಲಿ ಭಾರತ ಹಾಗೂ ಪ್ರಧಾನಿ ಮೋದಿ ಬಹಳ ಉನ್ನತ ಸ್ಥಾನದಲ್ಲಿದ್ದಾರೆ ಎಂದು ಹೇಳಿದರು.

ನಾವು ಇದನ್ನು ಜಿ20 ಶೃಂಗಸಭೆಯಲ್ಲಿ ಕಂಡಿದ್ದೇವೆ. ಹಲವು ರಾಷ್ಟ್ರಗಳ ನಡುವೆ ಒಮ್ಮತವನ್ನು ರೂಪಿಸುವಲ್ಲಿ ಪ್ರಧಾನಿ ಮೋದಿ ಪ್ರಮುಖ ಪಾತ್ರ ವಹಿಸಿದರು. ಅಲ್ಲದೆ ಭಾರತದ ಪ್ರಧಾನಿ ನೀಡಿದ ಹೇಳಿಕೆಯು ಅಣ್ವಸ್ತ್ರ ಬಳಕೆಗೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ಅಪಾಯವನ್ನು ಎತ್ತಿ ತೋರಿಸಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಮೆರಿಕದ ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು, ಭಾರತದ ಪ್ರಧಾನಿ ಹಾಗೂ ಅಮೆರಿಕದ ಅಧ್ಯಕ್ಷರು ಈಗಾಗಲೇ 15ಕ್ಕೂ ಹೆಚ್ಚು ಬಾರಿ ಭೇಟಿಯಾಗಿದ್ದಾರೆ ಎಂದು ಉಲ್ಲೇಖಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು