ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಕ್ವೆಡಾರ್‌ ಜೈಲಿನಲ್ಲಿ ಗ್ರೆನೇಡ್ ಸ್ಫೋಟ: 24 ಸಾವು, 48 ಕೈದಿಗಳಿಗೆ ಗಾಯ

Last Updated 29 ಸೆಪ್ಟೆಂಬರ್ 2021, 3:22 IST
ಅಕ್ಷರ ಗಾತ್ರ

ಕ್ವಿಟೊ: ಈಕ್ವೆಡಾರ್‌ನ ಗಯಾಕ್ವಿಲ್‌ನ ಜೈಲಿನಲ್ಲಿ ಗ್ರೆನೇಡ್ ಸ್ಫೋಟಗೊಂಡು 24 ಕೈದಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ 48 ಮಂದಿ ಕೈದಿಗಳು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಕಾರಾಗೃಹಗಳ ಬ್ಯುರೊ ಪ್ರಕಟಣೆಯಲ್ಲಿ ತಿಳಿಸಿದೆ.

ಗ್ರೆನೇಡ್ ಸ್ಫೋಟದಿಂದಲೇ ಕೈದಿಗಳು ಸಾವಿಗೀಡಾಗಿರುವುದು ದೃಢಪಟ್ಟಿದೆ ಎಂದು ಪ್ರಾದೇಶಿಕ ಪೊಲೀಸ್‌ ಕಮಾಂಡರ್‌ ಜನರಲ್‌ ಫೌಸ್ಟೊ ಬ್ಯೂನಾನೊ ತಿಳಿಸಿದ್ದಾರೆ.

ರಾಷ್ಟ್ರೀಯ ಕಾರಾಗೃಹಗಳ ಬ್ಯುರೊ ಪ್ರಕಟಣೆಯನ್ನು ಟ್ವೀಟ್‌ ಮಾಡಿರುವ ಈಕ್ವೆಡಾರ್‌ ಅಧ್ಯಕ್ಷ ಗಿಲ್ಲೆರ್ಮೊ ಲಾಸೊ, ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೃತಪಟ್ಟವರು ಮಾದಕ ವಸ್ತು ಸಾಗಾಟಕ್ಕೆ ಸಂಬಂಧಿಸಿ ವಿವಿಧ ಪ್ರಕರಣಗಳ ಆರೋಪಿಗಳಾಗಿದ್ದರು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವಾರ ಗಯಾಕ್ವಿಲ್‌ನ ಕಾರಾಗೃಹವೊಂದರಲ್ಲಿ ಆರೋಪಿಗಳ ಬಳಿ ಇದ್ದ ಎರಡು ಬದೂಕುಗಳು, ಒಂದು ರಿವಾಲ್ವರ್‌, 500ಕ್ಕೂ ಹೆಚ್ಚು ಮದ್ದುಗುಂಡುಗಳು, ಗ್ರೆನೇಡ್ ಸೇರಿದಂತೆ ಮನೆಯಲ್ಲಿ ತಯಾರಿಸಿದ ಸ್ಫೋಟಕಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಕೈದಿಗಳು ಪರಾರಿಯಾಗಲು ಸ್ಫೋಟ ನಡೆಸಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT