ಗುರುವಾರ , ಸೆಪ್ಟೆಂಬರ್ 23, 2021
22 °C
ಮುಂಬೈ ಮೇಲೆ ದಾಳಿ ಪ್ರಕರಣ

ಭಾರತಕ್ಕೆ ರಾಣಾ ಹಸ್ತಾಂತರ: ಬೈಡನ್‌ ಆಡಳಿತ ಸಮ್ಮತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: 2008ರ ಮುಂಬೈ ಮೇಲಿನ ಉಗ್ರರ ದಾಳಿ ಪ್ರಕರಣದ ಆರೋಪಿ, ಪಾಕಿಸ್ತಾನ ಮೂಲದ ಕೆನಡಾ ಉದ್ಯಮಿ ತನಾವ್ಟುರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಆಡಳಿತ ಒಪ್ಪಿಗೆ ನೀಡಿದೆ.

ರಾಣಾ ಹಸ್ತಾಂತರ ಕುರಿತ ಅರ್ಜಿಯ ವಿಚಾರಣೆ ನಡೆಸುತ್ತಿರುವ ಲಾಸ್‌ಏಂಜಲೀಸ್‌ನ ಕೋರ್ಟ್‌ಗೆ ಈ ಮಾಹಿತಿ ನೀಡಲಾಗಿದೆ.

‘ರಾಣಾ ಹಸ್ತಾಂತರ ಕೋರಿ ಅರ್ಜಿ ಸಲ್ಲಿಸಿರುವ ಭಾರತ, ಆತನ ವಿರುದ್ಧದ ಆರೋಪಗಳಿಗೆ ಸಂಬಂಧಿಸಿ ಸಾಕಷ್ಟು ಸಾಕ್ಷ್ಯಗಳನ್ನು ಒದಗಿಸಿದೆ’ ಎಂದು ಕ್ಯಾಲಿಫೋರ್ನಿಯಾ ಸೆಂಟ್ರಲ್‌ ಡಿಸ್ಟ್ರಿಕ್ಟ್‌ ಆಡಳಿತವು ಕೋರ್ಟ್‌ಗೆ ಮಾಹಿತಿ ನೀಡಿದೆ.

59 ವರ್ಷದ ರಾಣಾನನ್ನು ತಲೆಮರೆಸಿಕೊಂಡಿರುವ ಆರೋಪಿ ಎಂದು  ಘೋಷಿಸಿರುವ ಭಾರತ, ಆತನ ಹಸ್ತಾಂತರ ಕೋರಿ ಅಮೆರಿಕಕ್ಕೆ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಆತನನ್ನು ಕಳೆದ ವರ್ಷ ಜೂನ್‌ 10ರಂದು ಲಾಸ್‌ ಏಂಜಲೀಸ್‌ನಲ್ಲಿ ಬಂಧಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು