ಭಾನುವಾರ, ಜನವರಿ 24, 2021
28 °C

ಇಂಡೊನೇಷ್ಯಾ: ಭೂ ಕುಸಿತದಲ್ಲಿ 13 ಮಂದಿ ಸಾವು, 26 ಜನ ನಾಪತ್ತೆ

ಎಪಿ Updated:

ಅಕ್ಷರ ಗಾತ್ರ : | |

Prajavani

ಜಕಾರ್ತ: ಇಂಡೊನೇಷ್ಯಾದ ಸುಮೆದಾಂಗ್‌ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭಾನುವಾರ ಸಂಭವಿಸಿದ ಭೂ ಕುಸಿತದಲ್ಲಿ 13 ಮಂದಿ ಮೃತಪಟ್ಟಿದ್ದು, 29 ಜನರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ಜಾವಾದ ಸಿಂಚಾನುಜುಂಗ್‌ ಗ್ರಾಮದಲ್ಲಿ ಭೂ ಕುಸಿತ ಸಂಭವಿಸಿದೆ. ನಾಪತ್ತೆಯಾಗಿರುವ 26 ಮಂದಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದರು.

‘ಮಳೆಯಿಂದಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಂದರೆ ಉಂಟಾಗುತ್ತಿದೆ’ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿರ್ವಹಣಾ ಸಂಸ್ಥೆಯ ವಕ್ತಾರ ರಾದಿತ್ಯ ಜಾತಿ ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು