ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಾಲೆಯಲ್ಲಿ ಗುಂಡಿನ ದಾಳಿ: ಮೂವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಸಾವು

Last Updated 27 ಮಾರ್ಚ್ 2023, 21:01 IST
ಅಕ್ಷರ ಗಾತ್ರ

ನ್ಯಾಶ್‌ವಿಲ್ಲೆ(ಅಮೆರಿಕ)(ರಾಯಿಟರ್ಸ್): ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ 28 ವರ್ಷದ ಯುವತಿಯೊಬ್ಬಳು ಗುಂಡಿನ ದಾಳಿ ನಡೆಸಿದ್ದು, ಮೂವರು ವಿದ್ಯಾರ್ಥಿಗಳು ಹಾಗೂ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.

ದಾಳಿ ನಡೆಸಿರುವ ಯುವತಿಯನ್ನು ಪೊಲೀಸರು ಗುಂಡಿಟ್ಟು ಸಾಯಿಸಿದ್ದಾರೆ ಎಂದೂ ವಿವರಿಸಿದ್ದಾರೆ. ಯುವತಿ ಈ ಕೃತ್ಯ ಎಸಗಿರುವುದಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ರೈಫಲ್‌ ಹಾಗೂ ಒಂದು ಪಿಸ್ತೂಲಿನೊಂದಿಗೆ ಬಂದ ಯುವತಿಯು ಗುಂಡಿನ ದಾಳಿ ನಡೆಸಿದ್ದಾಳೆ. ಈ ಶಾಲೆಯಲ್ಲಿ ನರ್ಸರಿಯಿಂದ ಆರನೇ ತರಗತಿ ವರೆಗಿನ ವಿದ್ಯಾರ್ಥಿಗಳು ಕಲಿಯುತ್ತಿದ್ದರು ಎಂದೂ ತಿಳಿಸಿದ್ದಾರೆ.

ಶಾಲೆಯನ್ನು ಸುತ್ತುವರಿದ ಶಸ್ತ್ರಧಾರಿ ಪೊಲೀಸರು ಉಳಿದ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT