ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ ದಾಳಿಯ ಸಂಚುಕೋರ ಹಫೀಜ್ ಮನೆ ಬಳಿ ಸ್ಫೋಟ, ಮೂವರ ಸಾವು

Last Updated 23 ಜೂನ್ 2021, 10:51 IST
ಅಕ್ಷರ ಗಾತ್ರ

ಲಾಹೋರ್: ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ ಮನೆ ಬಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಮೂವರು ಮೃತಪಟ್ಟು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೌಹರ್ ಟೌನ್‌ನ ಬಿಒಆರ್ ಸೊಸೈಟಿಯ ಸಯೀದ್ ನಿವಾಸದ ಹೊರಗಿನ ಪೊಲೀಸ್ ಪಿಕೆಟ್‌ನಲ್ಲಿ ಸ್ಫೋಟ ಸಂಭವಿಸಿದೆ.

ಸಯೀದ್ ಅವರನ್ನು ಉಲ್ಲೇಖಿಸಿ ಹೈ ಪ್ರೊಫೈಲ್ ವ್ಯಕ್ತಿಗಳ ಮನೆಯ ಹೊರಗೆ ಯಾವುದೇ ಪೊಲೀಸ್ ಪಿಕೆಟ್ ಇಲ್ಲದಿದ್ದರೆ ‘ದೊಡ್ಡ ನಷ್ಟ’ಉಂಟಾಗಬಹುದೆಂದು ಪಂಜಾಬ್ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಪಂಜಾಬ್ ಇನಾಮ್ ಘನಿ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದಾರೆ ಮತ್ತು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT