ಬುಧವಾರ, ಸೆಪ್ಟೆಂಬರ್ 22, 2021
23 °C

ಪಾಕಿಸ್ತಾನ: ಕಾರು–ಬಸ್‌ ಡಿಕ್ಕಿ; 30 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಹೋರ್‌: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ದೇರಾ ಘಾಜಿ ಜಿಲ್ಲೆಯ ಹೆದ್ದಾರಿಯೊಂದರಲ್ಲಿ ಸೋಮವಾರ ಪ್ರಯಾಣಿಕರ ಬಸ್‌ ಮತ್ತು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿದೆ. ಇದರಲ್ಲಿ 30 ಮಂದಿ ಮೃತಪಟ್ಟಿದ್ದು, 40 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ.

‘ಬಸ್‌ ಸಿಯಾಲ್‌ಕೋಟ್‌ನಿಂದ ರಾಜನ್‌ಪುರಕ್ಕೆ ಹೋಗುತ್ತಿದ್ದಾಗ ಸಿಂಧೂ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು ಹೆಚ್ಚಿನವರು ಕಾರ್ಮಿಕರಾಗಿದ್ದು, ಅವರು ಹಬ್ಬಕ್ಕಾಗಿ ಮನೆಗೆ ಹೋಗುತ್ತಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಮೂಲಗಳು ಹೇಳಿವೆ.

‘ಡೇರಾ ಘಾಜಿ ಬಳಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಚಾಲಕರು ಪ್ರಯಾಣಿಕರ ಸುರಕ್ಷತೆಗಾಗಿ ಜಾಗೂರೂಕರಾಗಿ ಬಸ್‌ ಚಲಾಯಿಸಬೇಕು’ ಎಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಫವಾದ್ ಚೌಧರಿ ಅವರು ಟ್ವೀಟ್‌ ಮಾಡಿದ್ದಾರೆ.

‘ಬಸ್‌ ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ತಪ್ಪಿ, ಅಪಘಾತ ಸಂಭವಿಸಿರಬಹುದು’ ಎಂದು ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು