ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದರೆ 300 ಯೂನಿಟ್‌ ಉಚಿತ ವಿದ್ಯುತ್‌: ಕೇಜ್ರಿವಾಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಚಂಡೀಗಡ: ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ, ಪ್ರತಿಯೊಂದು ಮನೆಗೂ ಪ್ರತಿ ತಿಂಗಳು 300 ಯೂನಿಟ್‌ ಉಚಿತ ವಿದ್ಯುತ್‌ ಪೂರೈಕೆ ಮಾಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಭರವಸೆ ನೀಡಿದ್ದಾರೆ.

‌ಚಂಡೀಗಡದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಎಪಿ ಅಧಿಕಾರಕ್ಕೆ ಬಂದರೆ ಪಂಜಾಬ್‌ನಲ್ಲಿ 24 ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡಲಾಗುವುದು ಮತ್ತು ಬಾಕಿ ಇರುವ ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡುವುದಾಗಿ ಹೇಳಿದರು.

‘ಪಂಜಾಬ್‌ನಲ್ಲಿ ವಿದ್ಯುತ್‌ ಉತ್ಪಾದಿಸಲಾಗುತ್ತದೆ. ಆದರೂ ದೇಶದಲ್ಲಿ ಪಂಜಾಬ್‌ನಲ್ಲಿಯೇ ವಿದ್ಯುತ್‌ ಅತಿ ಹೆಚ್ಚು ದುಬಾರಿ. ಅದೇ ದೆಹಲಿಯಲ್ಲಿ ವಿದ್ಯುತ್‌ ಅನ್ನು ಬೇರೆ ದೇಶಗಳಿಂದ ಖರೀದಿಸಲಾಗುತ್ತದೆ. ಆದರೂ ಅತಿ ಕಡಿಮೆ ಬೆಲೆಯಲ್ಲಿ ಜನರಿಗೆ ನೀಡಲಾಗುತ್ತದೆ’ ಎಂದು ಅವರು ತಿಳಿಸಿದರು.

ಈ ವೇಳೆ ಎಎಪಿಯ ಪಂಜಾಬ್ ಘಟಕದ ಮುಖ್ಯಸ್ಥ ಭಗವಂತ್ ಮನ್, ಪಕ್ಷದ ಪಂಜಾಬ್ ವ್ಯವಹಾರಗಳ ಅಧ್ಯಕ್ಷ ಜರ್ನೈಲ್ ಸಿಂಗ್,  ಶಾಸಕ ಹರ್ಪಾಲ್ ಸಿಂಗ್ ಚೀಮಾ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು