ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾ ದಾಳಿಯಲ್ಲಿ ಉಕ್ರೇನ್‌ನ 3 ಸಾವಿರ ಸೈನಿಕರು ಮೃತಪಟ್ಟಿದ್ದಾರೆ: ಝೆಲೆನ್‌ಸ್ಕಿ

Last Updated 16 ಏಪ್ರಿಲ್ 2022, 2:10 IST
ಅಕ್ಷರ ಗಾತ್ರ

ಕೀವ್: ರಷ್ಯಾ ಪಡೆಗಳು ನಡೆಸಿದ ದಾಳಿಗಳಲ್ಲಿ ಉಕ್ರೇನ್‌ನ 2,500 ರಿಂದ 3,000 ಮಂದಿ ಸೈನಿಕರು ಮೃತಪಟ್ಟಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಹೇಳಿದ್ದಾರೆ.

ರಷ್ಯಾ ದಾಳಿಯಿಂದಾಗಿ ಉಕ್ರೇನ್‌ನಲ್ಲಿ 10,000 ಜನರು ಗಾಯಗೊಂಡಿದ್ದಾರೆ ಎಂದು ಶುಕ್ರವಾರ ಝೆಲೆನ್‌ಸ್ಕಿ ‘ಸಿಎನ್‌ಎನ್‌’ಗೆ ತಿಳಿಸಿದ್ದಾರೆ.

ರಷ್ಯಾ ಪಡೆಗಳು ಸಮುದ್ರದಿಂದ ಉಡಾಯಿಸುವ ದೀರ್ಘ ಶ್ರೇಣಿಯ ಕಲಿಬ್‌ ಕ್ಷಿಪಣಿಗಳನ್ನು ಬಳಸಿ ಕೀವ್‌ ಹೊರ ವಲಯದ ವಿಶ್ನೆವೆ ಪಟ್ಟಣದಲ್ಲಿನ ಉಕ್ರೇನ್‌ ಸೇನಾ ಸಾಧನಗಳ ಕಾರ್ಖಾನೆಯನ್ನು ಗುರುವಾರ ತಡರಾತ್ರಿ ಧ್ವಂಸಗೊಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ರಷ್ಯಾ, ಗಡಿ ಪಟ್ಟಣಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವುದಕ್ಕೆ ಮತ್ತು ‘ಮಾಸ್ಕವಾ’ ನೌಕೆ ಮುಳುಗಿಸಿದಕ್ಕೆ ಪ್ರತೀಕಾರವಾಗಿ ಉಕ್ರೇನ್‌ನ ಕೀವ್‌ ಮೇಲೆ ಕ್ಷಿಪಣಿ ದಾಳಿ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಫೆಬ್ರುವರಿ 24ರಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ‘ಮಿಲಿಟರಿ ಕಾರ್ಯಾಚರಣೆ’ ಘೋಷಿಸಿದ್ದರು, ಇದರ ಬೆನ್ನಲ್ಲೇ ರಷ್ಯಾದ ಸೇನಾಪಡೆಗಳು ಉಕ್ರೇನ್‌ನ ಪ್ರಮುಖ ವಾಯುನೆಲೆಗಳು, ನಗರಗಳ ಮೇಲೆ ಕ್ಷಿಪಣಿ ಮತ್ತು ಶೆಲ್ ದಾಳಿಗಳನ್ನು ನಡೆಸಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ವ್ಲಾಡಿಮಿರ್ ಪುಟಿನ್ ಕ್ರಮವನ್ನು ಅಮೆರಿಕ, ಬ್ರಿಟನ್, ಕೆನಡಾ, ಯುರೋಪ್ ಒಕ್ಕೂಟ ಸೇರಿದಂತೆ ಹಲವು ರಾಷ್ಟ್ರಗಳು ತೀವ್ರವಾಗಿ ಖಂಡಿಸಿದ್ದು, ಹಲವು ಆರ್ಥಿಕ ನಿರ್ಬಂಧಗಳನ್ನು ವಿಧಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT