ಶುಕ್ರವಾರ, ಫೆಬ್ರವರಿ 3, 2023
24 °C

ಬಿಬಿಸಿಯ ‘100 ಪ್ರಭಾವಿ ಮಹಿಳೆ’ಯರ ಪಟ್ಟಿಯಲ್ಲಿ ನಾಲ್ವರು ಭಾರತೀಯರು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್: ಬಿಬಿಸಿಯು ಪ್ರಸಕ್ತ ವರ್ಷದ ‘100 ಪ್ರಭಾವಿ ಮಹಿಳೆ’ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಟಿ ಹಾಗೂ ನಿರ್ಮಾಪಕಿ ಪ್ರಿಯಾಂಕಾ ಚೋಪ್ರಾ ಜೋನಸ್‌ ಸೇರಿ ನಾಲ್ವರು ಭಾರತೀಯರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಏರೋನಾಟಿಕಲ್ ಎಂಜಿನಿಯರ್ ಶಿರಿಷಾ ಬಂಡ್ಲಾ, ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಗೀತಾಂಜಲಿಶ್ರೀ ಹಾಗೂ ಸಮಾಜ ಸೇವಕಿ ಸ್ನೇಹಾ ಜವಳೆ, ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತೀಯರಾಗಿದ್ದಾರೆ.

ಶಿರಿಷಾ ಬಂಡ್ಲಾ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಾರೆ. ಸ್ನೇಹಾ ಜವಳೆ ಅವರು ಕೌಟುಂಬಿಕ ದೌರ್ಜನ್ಯದ ಸಂತ್ರಸ್ತೆ. ನಂತರ ಅವರು ಇದರ ವಿರುದ್ಧ ಹೋರಾಟ ಕೈಗೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು