ಮಾಸ್ಕೋ (ರಷ್ಯಾ): ರಷ್ಯಾದ ಆಗ್ನೇಯ ಸೈಬೀರಿಯಾದ ಕಾಡಿನಲ್ಲಿ ಲಘು ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.
ವಿಮಾನದಲ್ಲಿ ಇಬ್ಬರು ಪೈಲಟ್‌ಗಳು ಸೇರಿದಂತೆ ಒಟ್ಟು 16 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.
ಇರ್ಕುಟ್ಸ್ಕ್ ನಗರದಿಂದ ಹಾರಾಟ ನಡೆಸಿದ್ದ ಎಲ್ -410 ಸಂಖ್ಯೆಯ ವಿಮಾನವು ಕಜಚಿಂಕೋಯ್ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ ಎಂದು ಸ್ಥಳೀಯ ತನಿಖಾ ಸಂಸ್ಥೆಯೊಂದು ಹೇಳಿದೆ.
ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎಂದು ವಿಮಾನದೊಳಗಿದ್ದ ಸಿಬ್ಬಂದಿಯೊಬ್ಬರು ಮಾಹಿತಿ ರವಾನಿಸಿದ್ದರು ಎಂದು ಸ್ಥಳೀಯ ತುರ್ತು ಸೇವೆಗಳ ಪ್ರಾಥಮಿಕ ವರದಿ ತಿಳಿಸಿರುವುದಾಗಿ ಇಂಟರ್‌ಫ್ಯಾಕ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸದ್ಯ ಘಟನಾ ಸ್ಥಳದಲ್ಲಿ 11 ಮಂದಿಯನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.