ಮಂಗಳವಾರ, ಜುಲೈ 27, 2021
20 °C

ಅಮೆರಿಕ: ಮಿಚಿಗನ್‌ ಸಂಗೀತೋತ್ಸವದಲ್ಲಿ ಭಾಗಿಯಾಗಿದ್ದ ನಾಲ್ವರ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಬ್ರೂಕ್ಲಿನ್(ಅಮೆರಿಕ): ‘ದಕ್ಷಿಣ ಮಿಚಿಗನ್‌ನಲ್ಲಿ ವಾರಾಂತ್ಯದಲ್ಲಿ ನಡೆದ ಕಂಟ್ರಿ ಮ್ಯೂಸಿಕ್‌ ಫೆಸ್ಟಿವಲ್‌ನಲ್ಲಿ ಭಾಗವಹಿಸಿದ್ದ ನಾಲ್ವರು ಮೃತಪಟ್ಟಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

ಸಂಚಾರಿ ವ್ಯಾನ್‌ನಲ್ಲಿದ್ದ ಇವರು ಕಾರ್ಬನ್‌ ಮಾನಾಕ್ಸೈಡ್‌ ‍ಸೇವಿಸಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ವಾಹನದಲ್ಲಿದ್ದ ಇನ್ನಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ’ ಎಂದು ಲೆನಾವೀ ಕೌಂಟಿ ಶೆರಿಫ್‌ನ ಅಧಿಕಾರಿ ಹೇಳಿದ್ದಾರೆ.

‘ಇವರ ವಾಹನದ ಹತ್ತಿರದಲ್ಲಿದ್ದ ಜನರೇಟರ್‌ ಹೊರಸೂಸಿದ ಕಾರ್ಬನ್‌ ಮಾನಾಕ್ಸೈಡ್‌ ಸೇವಿಸಿ, ಮೂವರು ಮೃತಪಟ್ಟಿರಬಹುದು’ ಎಂದು ಶರೀಫ್‌ನ ಅಧಿಕಾರಿ ಟ್ವೀಟ್‌ ಮಾಡಿದ್ದಾರೆ. 

‘ಇದೇ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 30 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿರುವ ಪ್ರತ್ಯೇಕ ಪ್ರಕರಣ ವರದಿಯಾಗಿದೆ. ಮಹಿಳೆಯ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು