ಬುಧವಾರ, ಮಾರ್ಚ್ 22, 2023
25 °C

ಬಲೂಚಿಸ್ತಾನದಲ್ಲಿ ಹೊತ್ತಿ ಉರಿದ ಬಸ್‌: 42 ಮಂದಿ ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್‌: ನೈರುತ್ಯ ಬಲೂಚಿಸ್ತಾನ ಪ್ರಾಂತ್ಯದ ಲಾಸ್‌ಬೆಲಾ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ತೊರೆಗೆ ಉರುಳಿ ಬಿದ್ದು ಬೆಂಕಿಗೆ ಆಹುತಿಯಾಗಿದ್ದು, 42 ಮಂದಿ ಮೃತಪಟ್ಟಿದ್ದಾರೆ. 

ಈ ಬಸ್‌ ಕ್ವೆಟ್ಟಾದಿಂದ ಕರಾಚಿಗೆ ತೆರಳುತ್ತಿತ್ತು. ಬಸ್‌ನಲ್ಲಿ 48 ಮಂದಿ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಒಬ್ಬ ಮಹಿಳೆ, ಮಗು ಸೇರಿ ಮೂವರನ್ನು ಮಾತ್ರ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. 42 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತದೇಹಗಳು ಗುರುತು ಹಿಡಿಯಲಾಗದಷ್ಟು ಸುಟ್ಟು ಕರಕಲಾಗಿದ್ದು, ಮೃತರ ಗುರುತು ಪತ್ತೆಗೆ ಡಿಎನ್‌ಎ ಪರೀಕ್ಷೆ ನಡೆಸಲಾಗುವುದು. ಗಾಯಾಳುಗಳು ಕೂಡ ಗಂಭೀರ ಸ್ಥಿತಿಯಲ್ಲಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಲಾಸ್‌ಬೆಲಾದ ಸಹಾಯಕ ಆಯುಕ್ತ ಹಂಜಾ ಅಂಜುಂ ತಿಳಿಸಿದ್ದಾರೆ.

ದೋಣಿ ಮಗುಚಿ 10 ಮಕ್ಕಳು ಸಾವು

ಪೆಶಾವರ (ರಾಯಿಟರ್ಸ್‌); ವಾಯುವ್ಯ ಪಾಕಿಸ್ತಾನದ ತಾಂಡಾ ಅಟೆಕಟ್ಟೆಯಲ್ಲಿ ಭಾನುವಾರ ಧಾರ್ಮಿಕ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಮಗುಚಿ 10 ಮಕ್ಕಳು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುರಂತದಲ್ಲಿ ಆರು ಮಕ್ಕಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನತದೃಷ್ಟರು 7ರಿಂದ 12 ವರ್ಷದೊಳಗಿನವರು ಎಂದು ಕೊಹತ್‌ ಜಿಲ್ಲೆಯ ಜಿಲ್ಲಾಧಿಕಾರಿ ಫರ್ಖಾನ್‌ ಖಾನ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು