ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಹಿಂದೂ ದೇವಾಲಯ ಧ್ವಂಸ ಪ್ರಕರಣ: 45 ಆರೋಪಿಗಳ ಸೆರೆ

Last Updated 3 ಜನವರಿ 2021, 10:12 IST
ಅಕ್ಷರ ಗಾತ್ರ

ಪೇಶಾವರ: ವಾಯುವ್ಯ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ ಆರೋಪದಡಿ 45 ಮಂದಿಯನ್ನು ಭಾನುವಾರ ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ ಒಟ್ಟು 100 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದು ಪಾಕಿಸ್ತಾನಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ತೆರಿ ಗ್ರಾಮದಲ್ಲಿರುವ ದೇವಾಲಯವನ್ನು ಡಿಸೆಂಬರ್‌ 30ರಂದು ಧ್ವಂಸಗೊಳಿಸಲಾಗಿತ್ತು. ಜಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ ಸದಸ್ಯರು ಈ ಪ್ರಕರಣದಲ್ಲಿ ಭಾಗಿಯಾಗಿದ್ದು, 300ಕ್ಕೂ ಅಧಿಕ ಜನರ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಹಿಂದೂ ದೇವಾಲಯದ ನವೀಕರಣವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ಜಮಿಯತ್ ಉಲೆಮಾ-ಇ-ಇಸ್ಲಾಂ ಪಕ್ಷದ ಬೆಂಬಲಿಗರು ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ ಎಂದು ಪಾಕಿಸ್ತಾನಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಭಾರತೀಯ ರಾಯಭಾರಿ ಕಚೇರಿಯು ಜನವರಿ 1ರಂದು ಪ್ರತಿಭಟನೆ ವ್ಯಕ್ತಪಡಿಸಿತ್ತು. ಮಾನವ ಹಕ್ಕುಗಳ ಹೋರಾಟಗಾರರು ಘಟನೆಯನ್ನು ಖಂಡಿಸಿದ್ದರು.

ಅಧಿಕೃತ ಅಂದಾಜಿನ ಪ್ರಕಾರ, 75 ಲಕ್ಷ ಹಿಂದೂಗಳು ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. ಆದರೆ, ಸಮುದಾಯದ ಪ್ರಕಾರ, ದೇಶದಲ್ಲಿ 90 ಲಕ್ಷಕ್ಕೂ ಹೆಚ್ಚು ಹಿಂದೂಗಳು ವಾಸಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT