ಬುಧವಾರ, ಆಗಸ್ಟ್ 17, 2022
25 °C

ಸುಡಾನ್‌ನಲ್ಲಿ ಎರಡು ಬುಡಕಟ್ಟುಗಳ ನಡುವೆ ಜನಾಂಗೀಯ ಘರ್ಷಣೆ: 47 ಸಾವು

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಖಾರ್ಟೂಮ್: ಸುಡಾನ್‌ನ ದಕ್ಷಿಣ ಡಾರ್‌ಫೂರ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಜನಾಂಗೀಯ ಘರ್ಷಣೆಯಲ್ಲಿ 47 ಮಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮುಖಂಡರೊಬ್ಬರು ಸೋಮವಾರ ಹೇಳಿದ್ದಾರೆ.

ಪ್ರಕ್ಷುಬ್ಧಗೊಂಡಿರುವ ದಕ್ಷಿಣ ಡಾರ್‌ಫೂರ್‌ನಲ್ಲಿ ನಡೆದ ಪ್ರತ್ಯೇಕ ಗಲಭೆಗಳಲ್ಲಿ 80 ಮಂದಿ ಸಾವಿಗೀಡಾದ ಮರು ದಿನವೇ ಈ ಘಟನೆಯೂ ನಡೆದಿದೆ.

'ರೈಜಿಗಾಟ್ ಬುಡಕಟ್ಟು ಮತ್ತು ಫಲ್ಲಾಟಾ ಬುಡಕಟ್ಟುಗಳ ನಡುವಿನ ಘರ್ಷಣೆಗಳು ನಿಂತಿವೆ. ಘರ್ಷಣೆಯಲ್ಲಿ 47 ಮಂದಿ ಸಾವಿಗೀಡಾಗಿದ್ದಾರೆ ಎಂಬುದು ನಮ್ಮ ಲೆಕ್ಕಕ್ಕೆ ಸಿಕ್ಕಿದೆ,' ಎಂದು ಸ್ಥಳೀಯ ನಾಯಕ ಮೊಹಮ್ಮದ್ ಸಾಲೇಹ್ ಎಎಫ್‌ಪಿಗೆ ತಿಳಿಸಿದ್ದಾರೆ.

ಘಟನೆಯಲ್ಲಿ ಹಲವಾರು ಮನೆಗಳು ಸುಟ್ಟುಹೋಗಿವೆ ಎಂದು, ಅರಬ್‌ಏತರ ಫಲ್ಲಾಟಾ ಜನಾಂಗದ ಸಾಲೇಹ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು