ಕೆನಡಾ: ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳ ಸಾವು

ಟೊರೊಂಟೊ(ಪಿಟಿಐ): ಕೆನಡಾದ ಒಂಟಾರಿಯಾ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
ಕ್ವಿಂಟೆ ನಗರದ ಹೆದ್ದಾರಿಯಲ್ಲಿ ಶನಿವಾರ ಭಾರತೀಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ವ್ಯಾನ್ ಮತ್ತು ಟ್ರ್ಯಾಕ್ಟರ್ ನಡುವೆ ಅಪಘಾತ ಸಂಭವಿಸಿದ್ದು, ಹರ್ಪ್ರೀತ್‌ಸಿಂಗ್, ಜಾಸ್ಪಿಂಡರ್ ಸಿಂಗ್, ಕರ್ಣಪಾಲ್ ಸಿಂಗ್, ಮೋಹಿತ್ ಚೌಹಣ್ ಮತ್ತು ಪವನ್ ಕುಮಾರ್ ಮೃತಪಟ್ಟಿದ್ದಾರೆ. ಇವರೆಲ್ಲ 21ರಿಂದ 24 ವಯಸ್ಸಿನವರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕೆನಾಡದಲ್ಲಿರುವ ಭಾರತೀಯ ರಾಯಭಾರ ಕಚೇರಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.