ಶನಿವಾರ, ಅಕ್ಟೋಬರ್ 23, 2021
20 °C

ನಾರ್ವೆಯಲ್ಲಿ ಬಿಲ್ಲು–ಬಾಣದಿಂದ ದಾಳಿ: ಐದು ಜನ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಒಸ್ಲೊ( ಎಎಫ್‌ಪಿ): ಬಿಲ್ಲು–ಬಾಣದಿಂದ ದಾಳಿ ಮಾಡಿ 5 ಜನರನ್ನು ಹತ್ಯೆ ಮಾಡಿರುವ ಘಟನೆ ನಾರ್ವೆ ದೇಶದಿಂದ ವರದಿಯಾಗಿದೆ.

ಆಗ್ನೇಯ ನಾರ್ವೆಯ ಕಾಂಗ್ಸ್‌ಬರ್ಗ್‌ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ದಾಳಿ ಮಾಡಿರುವ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು ಭಯೋತ್ಪಾದಕ ಕೃತ್ಯ ಎಂಬುದನ್ನು ಪೊಲೀಸರು ಅಲ್ಲಗಳೆದಿದ್ದಾರೆ.

ಘಟನೆಯಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಬಂಧಿಸಿರುವ ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು