ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ದತ್ತಾ ಖೇಲ್ ಪ್ರದೇಶದಲ್ಲಿ ಗುರುವಾರ ಭದ್ರತಾ ಪಡೆಯ ಗುಂಡಿನ ದಾಳಿಯಿಂದ ಆರು ಜನ ಉಗ್ರರು ಹತ್ಯೆಯಾಗಿದ್ದಾರೆ.
ಬಲಿಯಾದ ಉಗ್ರರು ವಿವಿಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಭದ್ರತಾ ಪಡೆ ಇವರ ಶೋಧ ಕಾರ್ಯದಲ್ಲಿತ್ತು. ಗುಪ್ತದಳ ಮಾಹಿತಿ ಆಧರಿಸಿ ಗುರುವಾರ ದಾಳಿ ನಡೆಸಲಾಗಿತ್ತು. ಉಗ್ರರ ಬಳಿಯಿದ್ದ ಹಲವು ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.