ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಡೋನೇಷ್ಯಾದಲ್ಲಿ 6.1 ತೀವ್ರತೆಯ ಭೂಕಂಪ

Last Updated 16 ಜನವರಿ 2023, 2:25 IST
ಅಕ್ಷರ ಗಾತ್ರ

ಜಕಾರ್ತ: ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರದೇಶದಲ್ಲಿ ಸಂಭವಿಸಿದ 6.1 ತೀವ್ರತೆಯ ಭೂಕಂಪ ಸಂಭವಿಸಿದೆ.

ಸೋಮವಾರ ಬೆಳಗ್ಗೆ 6.30ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿ ತಿಳಿಸಿದ್ದಾರೆ.

ದಕ್ಷಿಣ ಜಾವಾದಲ್ಲೇ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ. ಆ್ಯಚೆ ಪಟ್ಟಣದ ಭೂಮಿಯ 48 ಕಿ.ಮೀ(30 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಹವಾಮಾನ ಮತ್ತು ಭೂಭೌತಶಾಸ್ತರ ಸಂಸ್ಥೆ ತಿಳಿಸಿದೆ.

ಭೂಮಿ ಕಂಪಿಸಿದ್ದರಿಂದ ಜನರು ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ. ತಕ್ಷಣದ ಮಾಹಿತಿಯ ಪ್ರಕಾರ ಯಾವುದೇ ಅವಘಡ ಸಂಭವಿಸಿಲ್ಲ. ಜೊತೆಗೆ ಸುನಾಮಿಯ ಅಪಾಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT