AstraZeneca jab
ಅಸ್ಟ್ರಾಜೆನೆಕಾ ಲಸಿಕೆ: ಬ್ರಿಟನ್ನಲ್ಲಿ 19 ಸಾವು

ಲಂಡನ್ (ಎಎಫ್ಪಿ): ಬ್ರಿಟನ್ನಲ್ಲಿ ಅಸ್ಟ್ರಾಜೆನೆಕಾ ಲಸಿಕೆ ಪಡೆದವರಲ್ಲಿ 79 ಮಂದಿಗೆ ಅಪರೂಪದ ರಕ್ತ ಹೆಪ್ಪುಗಟ್ಟುವಿಕೆ ತೊಂದರೆ ಕಾಣಿಸಿಕೊಂಡಿದ್ದು, ಇದರಲ್ಲಿ 19 ಮಂದಿ ಮೃತಪಟ್ಟಿದ್ದಾರೆ ಎಂದು ದೇಶದ ಔಷಧ ನಿಯಂತ್ರಕ ಸಂಸ್ಥೆ ಬುಧವಾರ ತಿಳಿಸಿದೆ.
‘ದೇಶದಲ್ಲಿ ಮಾರ್ಚ್ 31ರ ಹೊತ್ತಿಗೆ 20 ಮಿಲಿಯನ್ ಡೋಸ್ಗಳನ್ನು ನೀಡಲಾಗಿದೆ. ರಕ್ತ ಹೆಪ್ಪುಗಟ್ಟುವಿಕೆಯ 79 ಪ್ರಕರಣಗಳು ವರದಿಯಾಗಿವೆ. 79 ಪ್ರಕರಣಗಳಲ್ಲಿ 19 ಜನರು ಸಾವನ್ನಪ್ಪಿದ್ದಾರೆ’ ಎಂದು ಔಷಧ ಮತ್ತು ಆರೋಗ್ಯ ಉತ್ಪನ್ನಗಳ ನಿಯಂತ್ರಣ ಸಂಸ್ಥೆ (ಎಂಎಚ್ಆರ್ಎ) ಮುಖ್ಯ ಕಾರ್ಯನಿರ್ವಾಹಕ ಜೂನ್ ರೈನ್ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.