ಬೀಜಿಂಗ್: ವಾಯವ್ಯ ಚೀನಾದ ಗಿಜ್ಹೋವ್ ಪ್ರಾಂತ್ಯದಲ್ಲಿ ಪ್ರಯಾಣಿಕರ ದೋಣಿಯೊಂದು ಮುಳುಗಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ ಮತ್ತು 6 ಮಂದಿ ನಾಪತ್ತೆಯಾಗಿದ್ದಾರೆ.
ಜಾಂಗ್ಕೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ. 40 ಜನರು ಪ್ರಯಾಣಿಸಬಹುದಾದ ಸಾಮರ್ಥ್ಯವನ್ನು ದೋಣಿ ಹೊಂದಿತ್ತು. ದೋಣಿ ಮುಳುಗಿದ ಸಂದರ್ಭದಲ್ಲಿದ್ದ ಪ್ರಯಾಣಿಕರ ನಿಖರ ಸಂಖ್ಯೆಯ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
9 ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. 39 ಜನರನ್ನು ರಕ್ಷಿಸಿದ್ದು ತನಿಖೆ ಕೈಗೊಳ್ಳಲಾಗಿದೆ ಎಂದು ವರದಿಯಾಗಿದೆ.