ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಎಂಟು ಉಗ್ರರ ಹತ್ಯೆ

Last Updated 17 ಮಾರ್ಚ್ 2023, 11:15 IST
ಅಕ್ಷರ ಗಾತ್ರ

ಪೆಶಾವರ (ಪಿಟಿಐ): ‘ಪಾಕಿಸ್ತಾನದ ಭದ್ರತಾ ಪಡೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಎಂಟು ಉಗ್ರರನ್ನು ಹೊಡೆದುರುಳಿಸಿದೆ’ ಎಂದು ಸೇನಾ ಮಾಧ್ಯಮ ವಿಭಾಗ ತಿಳಿಸಿದೆ. ‘ಈ ಕಾರ್ಯಾಚರಣೆಯಲ್ಲಿ ಇಬ್ಬರು ಮಕ್ಕಳೂ ಮೃತಪಟ್ಟಿದ್ದಾರೆ’ ಎಂದು ಪ್ರಕಟಣೆ ಹೇಳಿದೆ.

‘ದಕ್ಷಿಣ ವಾಜಿರಿಸ್ತಾನದ ಜಂಗಾರದಲ್ಲಿ ಉಗ್ರರಿರುವ ಕುರಿತು ಖಚಿತ ಮಾಹಿತಿ ದೊರೆತ ಬಳಿಕ ಈ ಕಾರ್ಯಾಚರಣೆ ನಡೆಸಲಾಯಿತು. ಕಾರ್ಯಾಚರಣೆ ವೇಳೆ ಇಬ್ಬರು ಸೈನಿಕರಿಗೆ ಗಾಯಗಳಾಗಿವೆ. ಮೃತ ಉಗ್ರರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದೂ ಹೇಳಿಕೆ ತಿಳಿಸಿದೆ.

ಬಲೂಚಿಸ್ತಾನ– ಬಂದೂಕುಧಾರಿ ದಾಳಿಗೆ ಏಳು ಮಂದಿ ಸಾವು

‘ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಚಲಿಸುತ್ತಿದ್ದ ವಾಹನದ ಮೇಲೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ ಬುಡಕಟ್ಟು ಮುಖಂಡ ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.

‘ಝೋಬ್‌ ನಗರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಮುರ್ಘಾ ಕಿಬ್ಜಾಯಿ ಎಂಬಲ್ಲಿ ಈ ಘಟನೆ ನಡೆದಿದೆ’ ಎಂದು ಬಲೂಚಿಸ್ತಾನ ಪ್ರಾಂತ್ಯದ ಅರೆಸೇನಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಮೃತಪಟ್ಟವರಲ್ಲಿ ಬುಡಕಟ್ಟು ಮುಖಂಡ ಅಹ್ಮದ್ ಖಾನ್ ಕಿಬ್ಜಾಯಿ ಮತ್ತು ಅವರ ಇಬ್ಬರು ಸಹೋದರರು ಸೇರಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ಹೊಣೆಯನ್ನು ಇದುವರೆಗೂ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ.

‘ಅಹ್ಮದ್‌ ಕಿಬ್ಜಾಯಿ ಅವರು ಸ್ಥಳೀಯವಾಗಿ ಶತ್ರುಗಳನ್ನು ಹೊಂದಿದ್ದರು. ಘಟನೆಗೆ ಇದೂ ಸಹ ಕಾರಣವಿರಬಹುದು’ ಎಂದೂ ಪೊಲೀಸರು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT