ಗುರುವಾರ , ಜೂನ್ 17, 2021
21 °C

ಬುಡಕಟ್ಟು ಗುಂಪುಗಳ ನಡುವೆ ಗುಂಡಿನ ಚಕಮಕಿ: 9 ಮಂದಿ ಸಾವು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಕರಾಚಿ: ‘ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಎರಡು ಬುಡಕಟ್ಟು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 9 ಜನರು ಮೃತಪಟ್ಟಿದ್ದಾರೆ. ಐದು ಮಂದಿಗೆ ಗಾಯಗಳಾಗಿವೆ’ ಎಂದು ಮಾಧ್ಯಮವೊಂದು ಭಾನುವಾರ ವರದಿ ಮಾಡಿದೆ.

‘ಕಂಧಕೋಟ್‌ನಲ್ಲಿ ಜಗಿರಾನಿ ಮತ್ತು ಚಚಾರ್‌ ಬುಡಕಟ್ಟು ಗುಂಪಿನ ನಡುವೆ ಶನಿವಾರ ಗುಂಡಿನ ಕಾಳಗ ನಡೆದಿದ್ದು, ದೀರ್ಘ ಕಾಲದ ದ್ವೇಷವೇ ಇದಕ್ಕೆ ಕಾರಣ’ ಎಂದು ಎಆರ್‌ವೈ ನ್ಯೂಸ್‌ ವರದಿಯಲ್ಲಿ ಹೇಳಲಾಗಿದೆ.

‘ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು