ಕಾಬೂಲ್: ಪೂರ್ವ ಆಫ್ಗಾನಿಸ್ತಾನದಲ್ಲಿ ಮತ್ತೊಂದು ಭೂಕಂಪ ಸಂಭವಿಸಿದ್ದು, ಮತ್ತೆ ಐವರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಪಕ್ತಿಕಾ ಪ್ರಾಂತ್ಯದ ಗಯಾನ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ಐವರು ಮೃತಪಟ್ಟು 11 ಮಂದಿ ಗಾಯಗೊಂಡಿದ್ದಾರೆ ಬಖ್ತಾರ್ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬುಧವಾರ ಸಂಭವಿಸಿದ 6.1 ತೀವ್ರತೆಯ ಭೂಕಂಪದಲ್ಲಿ 1,150 ಮಂದಿ ಮೃತಪಟ್ಟಿದ್ದು, ಜನರ ಹಾಹಾಕಾರ ಮುಗಿಲುಮುಟ್ಟಿದೆ. ಇದರ ನಡುವೆ ಮತ್ತೊಂದು ಕಂಪನ ಅಲ್ಲಿನ ಜನರನ್ನು ಕಂಗೆಡಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.