ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ಭಾರತ ನಿಲ್ಲಬಲ್ಲದು: ಶ್ವೇತಭವನ

ವಾಷಿಂಗ್ಟನ್: ಭಾರತ ಹಿಂದೂಮಹಾಸಾಗರ–ಪೆಸಿಫಿಕ್ ಪ್ರದೇಶದಲ್ಲಿ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಸಮಾನ ಮನಸ್ಕ ದೇಶಗಳೊಂದಿಗೆ ಮೈತ್ರಿ ಹೊಂದಿದ ಭಾರತ, ಚೀನಾಕ್ಕೆ ಪ್ರತಿಸ್ಪರ್ಧಿಯಾಗಿ ನಿಲ್ಲಬಲ್ಲದು ಎಂದು ಶ್ವೇತಭವನ ಅಭಿಪ್ರಾಯಪಟ್ಟಿದೆ.
ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರಿಯಾನ್ ಅವರು 10 ಪುಟಗಳ ಈ ದಾಖಲೆಯನ್ನು ಇತ್ತೀಚೆಗೆ ಶ್ವೇತಭವನದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ. ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ಅಭಿವೃದ್ಧಿ, ಸ್ಥಿರತೆ ಕಾಪಾಡುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಲಿದೆ ಎಂದು ಈ ದಾಖಲೆಗಳಲ್ಲಿ ವಿವರಿಸಲಾಗಿದೆ.
ಭದ್ರತೆ ವಿಷಯದಲ್ಲಿ ಭಾರತ ಮತ್ತು ಅಮೆರಿಕ ಸ್ನೇಹ ಗಟ್ಟಿಯಾಗಿದೆ. ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಚೀನಾದ ಪ್ರಭಾವ, ಆಕ್ರಮಣಶೀಲತೆಯನ್ನು ತಗ್ಗಿಸಲು ಭಾರತ ಮತ್ತು ಅಮೆರಿಕ ಜಂಟಿಯಾಗಿ ಕಾರ್ಯ ನಿರ್ವಹಿಸುವ ಅಗತ್ಯ ಇದೆ ಎಂದೂ ಹೇಳಲಾಗಿದೆ.
ಗಡಿ ವಿಷಯವಾಗಿ ಚೀನಾದೊಂದಿಗೆ ಉಂಟಾಗಿರುವ ಸಂಘರ್ಷಮಯ ಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯವನ್ನೂ ಭಾರತ ಹೊಂದಿದೆ ಎಂದು ಈ ದಾಖಲೆಗಳಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.